Wednesday, June 3, 2026
Homeಕರಾವಳಿಉಡುಪಿನಿಲ್ಲದ ವರುಣನ ಆರ್ಭಟ; ಉಡುಪಿ ಜಿಲ್ಲೆಯಲ್ಲೂ ನಾಳೆ ಶಾಲಾ ಕಾಲೇಜುಗಳಿಗೆ ರಜೆ

ನಿಲ್ಲದ ವರುಣನ ಆರ್ಭಟ; ಉಡುಪಿ ಜಿಲ್ಲೆಯಲ್ಲೂ ನಾಳೆ ಶಾಲಾ ಕಾಲೇಜುಗಳಿಗೆ ರಜೆ

- Advertisement -
- Advertisement -

ಉಡುಪಿ ಜಿಲ್ಲೆಯಲ್ಲಿ  ವರುಣನ ಆರ್ಭಟ ಮುಂದುವರಿದಿದೆ. ಕಳೆದ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿಲೆ. ಈ ಹಿನ್ನೆಲೆ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜು.6 ಗುರುವಾರವೂ ರಜೆ ಘೋಷಿಸಲಾಗಿದೆ.

ಕೇಂದ್ರ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ಬುಧವಾರವೂ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು, ಜಿಲ್ಲಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಮುನ್ನೆಚ್ಚರಿಕೆ ವಹಿಸುವಂತೆ ಆಡಳಿತ ಸೂಚನೆ ನೀಡಿದೆ. ಪ್ರವಾಸಿಗರು ನದಿ ಮತ್ತು ಸಮುದ್ರ ತೀರಕ್ಕೆ ತೆರಳದಂತೆ ಮುನ್ಸೂಚನೆ ನೀಡಲಾಗಿದೆ.

- Advertisement -

Latest News

error: Content is protected !!