Sunday, June 7, 2026
Homeತಾಜಾ ಸುದ್ದಿವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆಗಿ ರುದ್ರಪ್ಪ ಲಮಾಣಿ ಆಯ್ಕೆ

ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆಗಿ ರುದ್ರಪ್ಪ ಲಮಾಣಿ ಆಯ್ಕೆ

- Advertisement -
- Advertisement -

ಬೆಂಗಳೂರು: ವಿಧಾನಸಭೆಯ ಡೆಪ್ಯುಟಿ ಸ್ಪೀಕರ್ ಆಗಿ ರುದ್ರಪ್ಪ ಮಾನಪ್ಪ ಲಮಾಣಿ ಆಯ್ಕೆಯಾಗಿದ್ದಾರೆ.‌ ವಿಧಾನಸಭೆಯಲ್ಲಿ ಇಂದು ಸ್ಪೀಕರ್ ಯು.ಟಿ. ಖಾದರ್ ರುದ್ರಪ್ಪ ಲಮಾಣಿ ಅವರ ಆಯ್ಕೆಯನ್ನು ಘೋಷಿಸಿದರು.

ನಿನ್ನೆ ಉಪಸಭಾಧ್ಯಕ್ಷ ಸ್ಥಾನಕ್ಕೆ ರುದ್ರಪ್ಪ ಲಮಾಣಿ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದು, ಇಂದು ಅವಿರೋಧ ಆಯ್ಕೆ ನಡೆದಿದೆ.

ಹಾವೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ರುದ್ರಪ್ಪ ಲಮಾಣಿ ಮಾಜಿ ಸಚಿವರೂ ಆಗಿದ್ದಾರೆ.

ವಿಧಾನಸಭೆಯಲ್ಲಿ ಡೆಪ್ಯುಟಿ ಸ್ಪೀಕರ್ ಆಗಿ ಆಯ್ಕೆಯಾದ ಬಳಿಕ ರುದ್ರಪ್ಪ ಲಮಾಣಿ ಅವರನ್ನು ಸ್ಪೀಕರ್ ಯು.ಟಿ. ಖಾದರ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅಭಿನಂದಿಸಿದರು.

- Advertisement -

Latest News

error: Content is protected !!