Friday, June 5, 2026
Homeಕರಾವಳಿಉಡುಪಿಉಡುಪಿ: ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಆಲದ ಮರ, ಬೈಕ್ ಸವಾರ ಸಾವು

ಉಡುಪಿ: ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಆಲದ ಮರ, ಬೈಕ್ ಸವಾರ ಸಾವು

- Advertisement -
- Advertisement -

ಉಡುಪಿ: ಕಳೆದ ಮೂರ್ನಾಲ್ಕು ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಇಂದು ಸಂಜೆ ಉಡುಪಿಗೆ ಭೇಟಿ ನೀಡಲಿರುವ ಸಚಿವರು, ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿ ನಂತರ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದರು.

ಮೂರು ದಿನಗಳಲ್ಲಿ ಮಳೆಯಿಂದಾಗಿ ಉಡುಪಿ ಜಿಲ್ಲೆಯಲ್ಲಿ ಈ ವರೆಗೆ ಒಟ್ಟು ಮೂರು ಮಾನವ ಪ್ರಾಣ ಹಾನಿ ಸಂಭವಿಸಿದೆ.

- Advertisement -

Latest News

error: Content is protected !!