Thursday, June 4, 2026
Homeಕರಾವಳಿಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್ ಕ್ಲಿಯರ್ : ವಾಹನಗಳ‌ ಸುಗಮ ಸಂಚಾರ ಆರಂಭ

ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್ ಕ್ಲಿಯರ್ : ವಾಹನಗಳ‌ ಸುಗಮ ಸಂಚಾರ ಆರಂಭ

- Advertisement -
- Advertisement -

ಚಿಕ್ಕಮಗಳೂರು: ಸರ್ಕಾರಿ ಬಸ್ ಗಳ‌ ಮುಖಾಮುಖಿ‌ ಡಿಕ್ಕಿಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿದ್ದ ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಕ್ಲಿಯರ್ ಆಗಿದ್ದು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಬಣಕಲ್ ಠಾಣೆ ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

ಎರಡು ಸರ್ಕಾರಿ ಬಸ್ಸುಗಳ ನಡುವಿನ ಡಿಕ್ಕಿಯಿಂದ ಉಂಟಾಗಿದ್ದ ಟ್ರಾಫಿಕ್ ಜಾಮ್ ನಿಂದಾಗಿ 25 ಕಿಲೋ ಮೀಟರ್ ವರೆಗೂ ವಾಹನಗಳು ಗಂಟೆಗಟ್ಟಲೆ ನಿಂತಲ್ಲೇ ನಿಂತಿದ್ದವು.

ಟ್ರಾಫಿಕ್ ಜಾಮ್ ನಿಂದಾಗಿ
ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರೋಗಿಯನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ತುರ್ತು ಚಿಕಿತ್ಸೆಗಾಗಿ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ತೆರಳುವಂತಾಗಿತ್ತು.

ಚಾರ್ಮಾಡಿ ಘಾಟ್ ನಿಂದ ಕೊಟ್ಟಿಗೆ ಹಾರದವರೆಗೂ ವಾಹನಗಳು ನಿಂತಲ್ಲೇ ನಿಂತು ಧಾರಾಕಾರ ಮಳೆಯಲ್ಲಿ ದಟ್ಟ ಕಾನನದ ನಡುವಿನ ರಸ್ತೆಯಲ್ಲಿ ವಾಹನ ಸವಾರರು ಪರದಾಡುವಂತಾಗಿತ್ತು.

- Advertisement -

Latest News

error: Content is protected !!