Thursday, June 4, 2026
Homeಕರಾವಳಿಬಂಟ್ವಾಳ; ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಮಾಹಿತಿ- ಸಂವಾದ ಕಾರ್ಯಕ್ರಮ

ಬಂಟ್ವಾಳ; ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಮಾಹಿತಿ- ಸಂವಾದ ಕಾರ್ಯಕ್ರಮ

- Advertisement -
- Advertisement -

ಬಂಟ್ವಾಳ; ಬ್ರಾಹ್ಮಣ ಪರಿಷತ್ ಸಭಾಭವನ ಬಿ. ಸಿ. ರೋಡ್ ಇಲ್ಲಿ ಅಧಿವಕ್ತಾ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ, ದಕ್ಷಿಣ ಕನ್ನಡ ಜಿಲ್ಲೆ — ಬಂಟ್ವಾಳ ತಾಲೂಕು ಘಟಕ ಹಾಗೂ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬಂಟ್ವಾಳ ಘಟಕ ಇದರ ಜಂಟಿ ಆಶ್ರಯದಲ್ಲಿ  ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಮಾಹಿತಿ- ಸಂವಾದ ಕಾರ್ಯಕ್ರಮವನ್ನು  ಆಯೋಜಿಸಲಾಯಿತು.

ವಕೀಲರ ಸಂಘ (ರಿ), ಬಂಟ್ವಾಳ ಇದರ ಅಧ್ಯಕ್ಷರಾದ ರಿಚರ್ಡ್ ಕೊಸ್ತಾ ಎಂ ಅವರು ದೀಪ ಬೆಳಗಿಸುವುದರ ಮುಖಾಂತರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಂಗಳೂರಿನ ಹಿರಿಯ ವಕೀಲರಾದ ಪರಮೇಶ್ವರ ಜಾಯಿಷ್ ರವರು ಏಕ ರೂಪ ನಾಗರಿಕ ಸಂಹಿತೆ ಬಗ್ಗೆ ಮಾಹಿತಿ ಮತ್ತು ಸಂವಾದ ನಡೆಸಿದರು. ಕಾರ್ಯಕ್ರಮದಲ್ಲಿ ಅಧಿವಕ್ತಾ ಪರಿಷತ್ ದಕ್ಷಿಣಕನ್ನಡ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಶ್ರೀಮತಿ ಪುಷ್ಪಲತ ಯು. ಕೆ ಯವರು ಉಪಸ್ಥಿತರಿದ್ದರು.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಇದರ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಅಧಿವಕ್ತಾ ಪರಿಷತ್ ಬಂಟ್ವಾಳ ಘಟಕದ ಅಧ್ಯಕ್ಷರಾದ ಉಮಾ ಯನ್ ಸೋಮಯಾಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೀರೇಂದ್ರ ಎಂ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಶ್ರೀ ರಾಮ ಪ್ರಭು ಧನ್ಯವಾದ ಸಮರ್ಪಿಸಿದರು.

- Advertisement -

Latest News

error: Content is protected !!