Saturday, June 6, 2026
Homeಕರಾವಳಿಉಡುಪಿಉಡುಪಿ: ಕಾರ್ಮಿಕರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯ

ಉಡುಪಿ: ಕಾರ್ಮಿಕರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯ

- Advertisement -
- Advertisement -

ಉಡುಪಿ: ಕಾರ್ಮಿಕರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉಡುಪಿಯ ಕಟಪಾಡಿಯಲ್ಲಿ ನಡೆದಿದೆ.ಒರಿಸ್ಸಾ ಮೂಲದ ಗಣೇಶ್ (50) ಕೊಲೆಗೀಡಾದ ಕಾರ್ಮಿಕ. ಕೊಲೆ ಆರೋಪಿ ಪರಾರಿಯಾಗಿದ್ದಾನೆ.

ಕಟಪಾಡಿ -ಶಿರ್ವ ರಸ್ತೆಯಲ್ಲಿರುವ ಕಟ್ಟಡ ಕಾಮಗಾರಿ ಮಾಡುತ್ತಿದ್ದ ಇವರಿಬ್ಬರ ಮಧ್ಯೆ ಕೆಲಸದ ವಿಚಾರವಾಗಿ ಜಗಳವಾಗಿದೆ. ಈ ವೇಳೆ ಗಲಾಟೆಲ್ಲಿ ಗಣೇಶ್ ಗಂಭೀರವಾಗಿ ಗಾಯಗೊಂಡಿದ್ದರೆನ್ನಲಾಗಿದೆ. ಕೂಡಲೇ ಸ್ಥಳೀಯರು ಹಾಗೂ ಇತರ ಕಾರ್ಮಿಕರು ಗಣೇಶ್‌ನನ್ನು ಆಸ್ಪತ್ರೆಗೆ ಸಾಗಿಸಿದ್ದು, ದಾರಿ ಮಧ್ಯೆ ಗಣೇಶ್ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಉಡುಪಿ ಎಸ್ಪಿ ಅಕ್ಷಯ್ ಹಾಕೇ ಮಚ್ಚೀಂದ್ರ, ಹೆಚ್ಚುವರಿ ಎಸ್ಪಿ ಸಿದ್ಧಲಿಂಗಪ್ಪ, ಕಾರ್ಕಳ ಡಿವೈಎಸ್ಪಿ ಅರವಿಂದ ಕುಲಗುಜ್ಜಿ, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ.ಸಿ.ಪೂವಯ್ಯ, ಕಾಪು ಎಸ್ಸೈ ಶ್ರೀಶೈಲ ಮುರಗೋಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!