Saturday, June 13, 2026
Homeತಾಜಾ ಸುದ್ದಿರಾಜ್ಯದ ಅತಿಥಿಗಳ ಸ್ವಾಗತಕ್ಕೆ ಶಿಷ್ಟಾಚಾರದ ಪ್ರಕಾರ ಅಧಿಕಾರಿಗಳ ನಿಯೋಜನೆ: ವಿಪಕ್ಷಗಳ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ರಾಜ್ಯದ ಅತಿಥಿಗಳ ಸ್ವಾಗತಕ್ಕೆ ಶಿಷ್ಟಾಚಾರದ ಪ್ರಕಾರ ಅಧಿಕಾರಿಗಳ ನಿಯೋಜನೆ: ವಿಪಕ್ಷಗಳ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು: ಬೆಂಗಳೂರಿಗೆ ಆಗಮಿಸಿದ್ದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಲಾಗಿದ್ದರಿಂದ ಶಿಷ್ಟಾಚಾರದ ಪ್ರಕಾರ ಆ ಎಲ್ಲಾ ಅತಿಥಿ ಗಣ್ಯರ ಸ್ವಾಗತಕ್ಕೆ ಮಾತ್ರ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ರಾಜಕೀಯ ಕಾರ್ಯಕ್ರಮಕ್ಕೆ ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿದ್ದಾರೆ ಎನ್ನುವ ವಿರೋಧ ಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿರುವ ಸಿಎಂ,
ರಾಜ್ಯಕ್ಕೆ ಆಗಮಿಸಿದ ನಾನಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳು ರಾಜ್ಯದ ಅತಿಥಿಗಳಾಗಿದ್ದರು. ಇದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿಯಂತೆಯೇ ನಡೆದಿದೆ ಎಂದು ಹೇಳಿದ್ದಾರೆ.

ಇಲ್ಲಿ ಯಾವುದೇ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ. ಬದಲಿಗೆ ಶಿಷ್ಟಾಚಾರದ ಪ್ರಕಾರವೇ ಗಣ್ಯರ ಸ್ವಾಗತಕ್ಕಷ್ಟೇ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತೇ ಹೊರತು ರಾಜಕೀಯ ಕಾರ್ಯಕ್ರಮಕ್ಕೆ ಅಧಿಕಾರಿಗಳನ್ನು ಬಳಸಿಕೊಂಡಿರಲಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಮಹಾಘಟಬಂಧನ್ ಸಭೆಗೆ ಬೆಂಗಳೂರಿಗೆ ಆಗಮಿಸಿದ್ದ ವಿವಿಧ ಗಣ್ಯರ ಸ್ವಾಗತಕ್ಕೆ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿದ್ದಕ್ಕೆ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಿಂದ ತೀವ್ರ ಟೀಕೆ ವ್ಯಕ್ತವಾಗಿತ್ತು.

- Advertisement -

Latest News

error: Content is protected !!