Saturday, October 17, 2026
Homeತಾಜಾ ಸುದ್ದಿವಿಧಾನ ಸೌಧದ ಕಾರಿಡಾರ್‍ ನಲ್ಲಿ ಕುಸಿದು ಬಿದ್ದ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್

ವಿಧಾನ ಸೌಧದ ಕಾರಿಡಾರ್‍ ನಲ್ಲಿ ಕುಸಿದು ಬಿದ್ದ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್

- Advertisement -
- Advertisement -

ಬೆಂಗಳೂರು; ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ವಿಧಾನ ಸೌಧದ ಕಾರಿಡಾರ್‍ ನಲ್ಲಿ ಕುಸಿದು ಬಿದ್ದ ಘಟನೆ ನಡೆದಿದೆ.

ಶಾಸಕರನ್ನು ವಿಧಾನ ಸಭೆಯಿಂದ ಅಮಾನತ್ತು ಮಾಡಲಾದ ಹಿನ್ನೆಲೆಯಲ್ಲಿ ಮಾರ್ಷಲ್ ಗಳು ಶಾಸಕರನ್ನು ಹೊರ ಹಾಕುವ ವೇಳೆ ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ವಿಧಾನ ಸೌಧದ ಕಾರಿಡಾರ್‍ ನಲ್ಲಿ ಕುಸಿದು ಬಿದ್ದಿದ್ದಾರೆ.

ಗದ್ದಲದ ವೇಳೆ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಬಿಪಿ ಜಾಸ್ತಿಯಾಗಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರನ್ನು ತುರ್ತುವಾಹನದ ಮೂಲಕ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

- Advertisement -

Latest News

error: Content is protected !!