Wednesday, June 3, 2026
Homeಕರಾವಳಿಮಂಗಳೂರಿನಲ್ಲಿ ಕಾಲೇಜೊಂದರ ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ; ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ

ಮಂಗಳೂರಿನಲ್ಲಿ ಕಾಲೇಜೊಂದರ ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ; ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ

- Advertisement -
- Advertisement -

ಮಂಗಳೂರಿನಲ್ಲಿ ಕಾಲೇಜೊಂದರ ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ ಮೆರೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ವೈದ್ಯಕೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಶುಕ್ರವಾರ ಸಂಜೆ 5:30 ಸುಮಾರಿಗೆ ಪಣಂಬೂರು ಬೀಚ್ ಗೆ ಬಂದಿದ್ದ ವೈದ್ಯಕೀಯ ವಿದ್ಯಾರ್ಥಿಗಳನ್ನು ವೀಕ್ಷಿಸುತ್ತಿದ್ದ ಇಬ್ಬರು ಅಪರಿಚಿತರು ತಮ್ಮ ಮೊಬೈಲ್ ನಲ್ಲಿ ವಿದ್ಯಾರ್ಥಿಗಳ ಚಲನವಲನಗಳನ್ನು ಚಿತ್ರೀಕರಿಸಿದ್ದರು. ಆದರೆ ಇದನ್ನು ಗಮನಿಸಿದ್ದ ವಿದ್ಯಾರ್ಥಿಗಳು ತಮ್ಮ ಪಾಡಿಗೆ ಇದ್ದರು ಎನ್ನಲಾಗಿದೆ.

ಬಳಿಕ ವಿದ್ಯಾರ್ಥಿಗಳನ್ನು ನಗರದ ಬಿಜೈ ಕಾಪಿಕಾಡ್ ಎಂಬಲ್ಲಿಅಪರಿಚಿತರು ತಡೆದಿದ್ದಾರೆ.ಈ ವೇಳೆ ವಿದ್ಯಾರ್ಥಿ ಮಹಮ್ಮದ್ ಹಫೀಸ್ (20) ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.ಬೀಚ್ ಗೆ 4 ಜನ ವಿದ್ಯಾರ್ಥಿನಿಯರು ಹಾಗೂ ಇಬ್ಬರು ವಿದ್ಯಾರ್ಥಿಗಳು ತೆರಳಿದ್ದರು ಎನ್ನಲಾಗಿದ್ದು ಈ ಸಂಬಂಧ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!