Friday, June 5, 2026
Homeಕರಾವಳಿಮಂಗಳೂರು: ಕಾಪಿಕಾಡ್ ನಲ್ಲಿ ಅನೈತಿಕ ಪೊಲೀಸ್ ಗಿರಿ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಕಾಪಿಕಾಡ್ ನಲ್ಲಿ ಅನೈತಿಕ ಪೊಲೀಸ್ ಗಿರಿ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ಮಂಗಳೂರಿನ ಕಾಪಿಕಾಡ್ ಎಂಬಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ. ದೀಕ್ಷಿತ್‌(32) ಹಾಗೂ ಲಾಯ್ಡ್‌ ಪಿಂಟೋ(32)ಬಂಧಿತ ಆರೋಪಿಗಳು.

ಆರೋಪಿಗಳಿಂದ ಸ್ಕೂಟರ್‌ ಮತ್ತು ಮೊಬೈಲ್‌ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.ಅಲ್ಲದೆ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಲಾಗಿದೆ.

6 ಮಂದಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪಣಂಬೂರು ಬೀಚ್ ಗೆ ವಿಹಾರಕ್ಕೆ ತೆರಳಿದ ವೇಳೆ ಹಿಂಬಾಲಿಸಿಕೊಂಡು ಬಂದ ತಂಡ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿತ್ತು.

- Advertisement -

Latest News

error: Content is protected !!