Sunday, June 7, 2026
Homeಕೊಡಗುಕೊಡಗು ಜಿಲ್ಲೆಯಲ್ಲಿ ನಾಳೆ ನಿಗದಿಯಾಗಿದ್ದ ಮಂಗಳೂರು ವಿವಿ ವ್ಯಾಪ್ತಿಯ ಪದವಿ ಪರೀಕ್ಷೆಗಳು ಮುಂದೂಡಿಕೆ

ಕೊಡಗು ಜಿಲ್ಲೆಯಲ್ಲಿ ನಾಳೆ ನಿಗದಿಯಾಗಿದ್ದ ಮಂಗಳೂರು ವಿವಿ ವ್ಯಾಪ್ತಿಯ ಪದವಿ ಪರೀಕ್ಷೆಗಳು ಮುಂದೂಡಿಕೆ

- Advertisement -
- Advertisement -

ಮಂಗಳೂರು: ಕೊಡಗು ಜಿಲ್ಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಧೀನಕ್ಕೊಳಪಟ್ಟ ಎಲ್ಲಾ ಕಾಲೇಜುಗಳಲ್ಲಿ ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ ಮಾತ್ರ ಜಿಲ್ಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.ಮುಂದೂಡಿದ ಪರೀಕ್ಷೆಗಳ ಪರಿಷ್ಕೃತ ದಿನಾಂಕವನ್ನು ಮರು ನಿಗದಿಪಡಿಸಲಾಗುವುದು ಎಂದು ಮಂಗಳೂರು ವಿವಿ ತಿಳಿಸಿದೆ.

ಉಳಿದಂತೆ ದಕ್ಷಿಣ ಕನ್ನಡ ಮತ್ತು‌ ಉಡುಪಿ ಜಿಲ್ಲೆಗಳ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಈ ಹಿಂದೆ ನಿಗದಿಯಾದಂತೆ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪರೀಕ್ಷೆಗಳು ನಡೆಯಲಿವೆ.

- Advertisement -

Latest News

error: Content is protected !!