Thursday, June 4, 2026
Homeತಾಜಾ ಸುದ್ದಿಅಂಗಾಗ ದಾನ ಜಾಗೃತಿ ರಾಯಭಾರಿಯಾಗುವಂತೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಆರೋಗ್ಯ ಇಲಾಖೆ ಆಹ್ವಾನ

ಅಂಗಾಗ ದಾನ ಜಾಗೃತಿ ರಾಯಭಾರಿಯಾಗುವಂತೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಆರೋಗ್ಯ ಇಲಾಖೆ ಆಹ್ವಾನ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಅಂಗಾಂಗ ದಾನ ಕುರಿತ ಜಾಗೃತಿಗೆ ರಾಯಭಾರಿಯಾಗುವಂತೆ ಅಶ್ವಿನಿ ಪುನೀತ್ ರಾಜಕುಮಾರ್ ಅವರನ್ನು ಆರೋಗ್ಯ ಇಲಾಖೆ ಆಹ್ವಾನಿಸಿದೆ.

ಆರೋಗ್ಯ ಇಲಾಖೆಯ ವತಿಯಿಂದ ಆಗಸ್ಟ್ 3 ರಂದು ಆಚರಿಸುವ ಅಂಗಾಂಗ ದಾನ ದಿನಾಚರಣೆಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಮುಖ್ಯ ಅತಿಥಿಯಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಹ್ವಾನಿಸಿದ್ದಾರೆ.

ವರನಟ ಡಾ. ರಾಜಕುಮಾರ್ ಅವರಂತೆಯೇ ದಿ. ಪುನೀತ್ ರಾಜಕುಮಾರ್ ಕೂಡಾ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದರು. ಪುನೀತ್ ರಾಜಕುಮಾರ್ ಅವರ ಕಣ್ಣುಗಳ ದಾನ ರಾಜ್ಯದಲ್ಲಿ ಸಾವಿರಾರು ಜನರಿಗೆ ಅಂಗಾಂಗ ದಾನ ಮಾಡಲು ಪ್ರೇರಣೆಯಾಗಿತ್ತು. ಅಲ್ಲದೇ ರಾಜ್ಯದಲ್ಲಿ ಅಂಗಾಂಗ ದಾನ ಪ್ರಮಾಣ ಏರಿಕೆ ಕೂಡಾ ಕಂಡಿತ್ತು.

ಅನೇಕರು ದಿ.ಪುನೀತ್ ರಾಜಕುಮಾರ್ ಅವರನ್ನೇ ಮಾದರಿಯನ್ನಾಗಿಟ್ಟುಕೊಂಡು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ. ಇದೀಗ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಅಂಗಾಂಗ ದಾನ ಜಾಗೃತಿಗೆ ರಾಯಭಾರಿಯಾಗುವಂತೆ ಆರೋಗ್ಯ ಇಲಾಖೆ ಆಹ್ವಾನ ನೀಡಿದೆ.

ಅಗಸ್ಟ್ 03 ರಂದು ಅಂಗಾಂಗ ದಾನ ದಿನಾಚರಣೆ ಆಚರಿಸುತ್ತಿರುವ ರಾಜ್ಯ ಆರೋಗ್ಯ ಇಲಾಖೆ, ಅಂಗಾಂಗ ದಾನ ಮಾಡಿದ ರಾಜ್ಯದ 150 ಕುಟುಂಬಗಳನ್ನು ಸನ್ಮಾನಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ.

- Advertisement -

Latest News

error: Content is protected !!