Friday, June 5, 2026
Homeಕರಾವಳಿವಿಟ್ಲ: ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಮಾರಣಾಂತಿಕ ಹಲ್ಲೆ

ವಿಟ್ಲ: ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಮಾರಣಾಂತಿಕ ಹಲ್ಲೆ

- Advertisement -
- Advertisement -

ವಿಟ್ಲ:  ಅನಂತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಗಣೇಶ್ ಪೂಜಾರಿ(60)  ಹಲ್ಲೆಗೆ ಒಳಗಾದವರು. ಅವರನ್ನು  ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಣೇಶ್ ಪೂಜಾರಿ(60) ಅವರು ರಸ್ತೆ ಬದಿಯ ಚರಂಡಿಯ ಶುಚೀಕರಣ ಮಾಡುತ್ತಿದ್ದಾಗ ಕಾಂಗ್ರೆಸ್ ಪಕ್ಷದ ವಲಯ ಅಧ್ಯಕ್ಷ ಸತೀಶ್ ಪೂಜಾರಿ ಬಾಕಿಲ ಮತ್ತು ತಂಡ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆಂದು ಎನ್ನಲಾಗಿದೆ.

ಈ ಬಗ್ಗೆ  ಪ್ರತಿಕ್ರಿಯಿಸಿರುವ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ತಕ್ಷಣ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು ಬಂಧಿಸಬೇಕು ಮತ್ತು ಮುಂದಿನ ದಿನಗಳಲ್ಲಿ ಶಾಂತಿ ಕದಡುವ ಇಂತಹ ಕೃತ್ಯಗಳು ಪುನರಾವರ್ತನೆಯಾಗದಂತೆ ತಡೆಯಬೇಕೆಂದು ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!