Wednesday, June 3, 2026
Homeಕರಾವಳಿಉಡುಪಿಉಡುಪಿ ಶೌಚಾಲಯ ವೀಡಿಯೋ ಪ್ರಕರಣವನ್ನು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಹಗುರವಾಗಿ ತೆಗೆದುಕೊಳ್ಳಬಾರದು:ಕಾರ್ಕಳ ಶಾಸಕ ಸುನಿಲ್...

ಉಡುಪಿ ಶೌಚಾಲಯ ವೀಡಿಯೋ ಪ್ರಕರಣವನ್ನು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಹಗುರವಾಗಿ ತೆಗೆದುಕೊಳ್ಳಬಾರದು:ಕಾರ್ಕಳ ಶಾಸಕ ಸುನಿಲ್ ಕುಮಾರ್ ಆಗ್ರಹ

- Advertisement -
- Advertisement -

ಉಡುಪಿ: ಉಡುಪಿಯ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಪ್ರಕರಣವನ್ನು ಬಹಳ ಹಗುರವಾಗಿ ತೆಗೆದುಕೊಳ್ಳುವ ಪ್ರಯತ್ನವನ್ನು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಮಾಡಬಾರದು ಎಂದು ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ.

ಪ್ರಕರಣದ ಸಮಗ್ರ ತನಿಖೆ ಮಾಡಬೇಕು ಎಂದು ಹೇಳಿರುವ ಸುನೀಲ್ ಕುಮಾರ್, ಶೌಚಾಲಯದಲ್ಲಿ ವೀಡಿಯೋ ಮಾಡುವಷ್ಟು ಮಾನಸಿಕತೆ ಆ ವಿದ್ಯಾರ್ಥಿನಿಯರಿಗೆ ಬರುತ್ತದೆ ಅಂತಾದರೆ ಇದರ ಹಿಂದೆ ಯಾವುದೋ ಷಡ್ಯಂತ್ರ, ಸಂಘಟನೆ ಕೆಲಸ ಮಾಡುತ್ತಿದೆ ಎಂದು ಮೇಲ್ನೋಟಕ್ಕೆ ಅನ್ನಿಸುತ್ತಿದೆ ಎಂದು ತಿಳಿಸಿದ್ದಾರೆ.

ಅಲ್ಲದೇ ತಕ್ಷಣ ವೀಡಿಯೋ ಮಾಡಿರುವ ವಿದ್ಯಾರ್ಥಿನಿಯರ ಮೇಲೆ ಮೊಕದ್ದಮೆ ದಾಖಲಿಸಿ ಹಿಂದೆ ಇರುವ ಷಡ್ಯಂತ್ರವನ್ನು ಸರ್ಕಾರ ಬಯಲಿಗೆಳೆಯಬೇಕು ಎಂದು ಒತ್ತಾಯಿಸಿರುವ ಸುನೀಲ್ ಕುಮಾರ್, ಮಹಿಳಾ ಆಯೋಗ ಮತ್ತು ಮಹಿಳಾ ಸಂಘಟನೆಗಳು ಇದರ ವಿರುದ್ಧ ಧ್ವನಿ ಎತ್ತಬೇಕು ಎಂದು ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!