Friday, June 5, 2026
Homeಕರಾವಳಿಉಡುಪಿಉಡುಪಿ ನರ್ಸಿಂಗ್ ಕಾಲೇಜು ಶೌಚಾಲಯದಲ್ಲಿ ವೀಡಿಯೋ ಪ್ರಕರಣ:ಏನೂ ಆಗಿಲ್ಲ ಅಂತಾದರೆ ಕಾಲೇಜು ವಿದ್ಯಾರ್ಥಿನಿಯರನ್ನು ಸಸ್ಪೆಂಡ್ ಮಾಡಿದ್ದೇಕೆ?:ಮಾಜಿ...

ಉಡುಪಿ ನರ್ಸಿಂಗ್ ಕಾಲೇಜು ಶೌಚಾಲಯದಲ್ಲಿ ವೀಡಿಯೋ ಪ್ರಕರಣ:ಏನೂ ಆಗಿಲ್ಲ ಅಂತಾದರೆ ಕಾಲೇಜು ವಿದ್ಯಾರ್ಥಿನಿಯರನ್ನು ಸಸ್ಪೆಂಡ್ ಮಾಡಿದ್ದೇಕೆ?:ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ಪ್ರಶ್ನೆ

- Advertisement -
- Advertisement -

ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಾನೂನಿನಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಪ್ರತಿಕ್ರಿಯೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್, ಪ್ರಕರಣ ಕುರಿತು ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಾನೂನಿನಡಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಕಾನೂನಿಗಿಂತ ಯಾರೂ ದೊಡ್ಡವರಲ್ಲ, ನನಗೆ ಮಾಹಿತಿ ಬಂದ ಪ್ರಕಾರ ಘಟನೆಗೆ ಸಂಬಂಧ ಪಟ್ಟಂತೆ ಯಾವುದೇ ವಿಡಿಯೋ ಕೂಡ ವೈರಲ್ ಆಗಿಲ್ಲ ಎಂದು ಸಚಿವೆ ಹೆಬ್ಬಾಳ್ಕರ್ ತಿಳಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

- Advertisement -

Latest News

error: Content is protected !!