Wednesday, June 3, 2026
Homeಕರಾವಳಿಉಡುಪಿಉಡುಪಿ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ; ಮೂವರು ವಿದ್ಯಾರ್ಥಿನಿಯರಿಗೆ ಷರತ್ತು...

ಉಡುಪಿ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ; ಮೂವರು ವಿದ್ಯಾರ್ಥಿನಿಯರಿಗೆ ಷರತ್ತು ಬದ್ಧ ಜಾಮೀನು

- Advertisement -
- Advertisement -

ಉಡುಪಿ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ. ಆರೋಪಿಗಳಾದ ಶಬನಾಜ್, ಆಲ್ಫಿಯಾ,ಆಲಿಮಾತುಲ್ ಶಾಫಿಯಾಗೆ ಇಂದು ಉಡುಪಿ ಜಿಲ್ಲಾ ನ್ಯಾಯಾಲಯ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಐಪಿಸಿ ಸೆಕ್ಷನ್ 509,204,175,34 ಐ,ಪಿ,ಸಿ,ಮತ್ತು 66(E) IT ACT ಅಡಿಯಲ್ಲಿ ಸುಮೋಟೋ ಕೇಸ್​ ದಾಖಲಿಸಿಕೊಂಡಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯರು ಜಾಮೀನು ಪಡೆದುಕೊಂಡಿದ್ದಾರೆ.

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಮೂವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದು, ತನಿಖಾಧಿಕಾರಿಗಳಿಗೆ ತನಿಖೆಗೆ ಸಹಕರಿಸುವುದು, ವಿಚಾರಣೆ ದಿನ ನ್ಯಾಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗುವುದು, ಸಾಕ್ಷಿಗಳಿಗೆ ಯಾವುದೇ ಬೆದರಿಕೆಯೊಡ್ಡದಿರುವುದು ಮತ್ತು ತಲಾ 20,000ರೂ. ಮೊತ್ತ ಬಾಂಡ್ ನ್ಯಾಯಾಲಯಕ್ಕೆ ಸಲ್ಲಿಸುವುದು ಸೇರಿದಂತೆ ಹಲವು ಷರತ್ತಿಗಳನ್ನು ನ್ಯಾಯಾಲಯ ವಿಧಿಸಿದೆ.

- Advertisement -

Latest News

error: Content is protected !!