Wednesday, June 3, 2026
Homeಕರಾವಳಿಬಂಟ್ವಾಳ; ಮಾರಣಾಂತಿಕ ಹಲ್ಲೆ ನಡೆಸಿ ಮೂರು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಬಂಟ್ವಾಳ; ಮಾರಣಾಂತಿಕ ಹಲ್ಲೆ ನಡೆಸಿ ಮೂರು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಬಂಟ್ವಾಳ: ಮಾರಣಾಂತಿಕ ಹಲ್ಲೆ ನಡೆಸಿ ಮೂರು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿದ್ದಾರೆ.  ಪುತ್ತೂರು ತಾಲೂಕಿನ ಕುದ್ಮಾರ್ ಬಾರೆಪಾಡಿ ನಿವಾಸಿ ರೋಷನ್ ಬಂಧಿತ ಆರೋಪಿ.

ರೋಷನ್ ಇದ್ದ ತಂಡವೊಂದು ಮೂರು ವರ್ಷಗಳ ಹಿಂದೆ ಬಡಗಬೆಳ್ಳೂರಿನ ವ್ಯಕ್ತಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿತ್ತು.
ಈ ಬಗ್ಗೆ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು, ಆರೋಪಿಗಾಗಿ ಶೋಧ ಕಾರ್ಯ ಕೂಡ ಮುಂದುವರಿದಿತ್ತು.


ಆದರೆ ಈತ ಕಳೆದ ಮೂರು ವರ್ಷಗಳಿಂದ ಪೋಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ.ಇದೀಗ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಹಾಗೂ ಅಪರಾಧ ವಿಭಾಗದ ಎಸ್‌. ಐ ಮೂರ್ತಿ ಅವರ ನೇತೃತ್ವದಲ್ಲಿ ಸಿಬ್ಬಂದಿಯಾದ ಗಣೇಶ್ ಪ್ರಸಾದ್, ಯೋಗೀಶ್, ಹಾಗೂ ವಿಜಯ್ ಅವರು ಈತನ ಮಾಹಿತಿ ಸಂಗ್ರಹಿಸಿ ಮಂಗಳೂರಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Latest News

error: Content is protected !!