Thursday, June 4, 2026
Homeಕರಾವಳಿಉಡುಪಿಉಡುಪಿ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ; ಸಿಎಂ ಕುಟುಂಬದ ವಿರುದ್ಧ ಅವಹೇಳನ...

ಉಡುಪಿ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ; ಸಿಎಂ ಕುಟುಂಬದ ವಿರುದ್ಧ ಅವಹೇಳನ ಪೋಸ್ಟ್ ಹಾಕಿದ ಬಿಜೆಪಿ ಕಾರ್ಯಕರ್ತೆ ಪೊಲೀಸ್ ವಶಕ್ಕೆ

- Advertisement -
- Advertisement -

ಉಡುಪಿ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ಮುಂದಿಟ್ಟುಕೊಂಡು ಸಿಎಂ ಕುಟುಂಬದ ವಿರುದ್ಧ ಅವಹೇಳನ ಪೋಸ್ಟ್ ಹಾಕಿದ ಬಿಜೆಪಿ ಕಾರ್ಯಕರ್ತೆಯನ್ನು ಪೊಲೀಸರು  ವಶಕ್ಕೆ ಪಡೆದಿದ್ದಾರೆ.

ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ನವರ ಪ್ರಕಾರ ಮಕ್ಕಳಾಟವಂತೆ..ಸಿದ್ದರಾಮಯ್ಯನವರ ಸೊಸೆ or ಹೆಂಡ್ತಿ ಅವ್ರ ವಿಡಿಯೋವನ್ನು ಇದೆ ತರ ಮಾಡಿದ್ರೆ ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ? ಎಂದು ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಟ್ವೀಟ್ ಮಾಡಿದ್ದರು.

ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇದೀಗ ಇಂದು ಶಕುಂತಲಾಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

Latest News

error: Content is protected !!