Thursday, June 4, 2026
Homeಕರಾವಳಿವಿಟ್ಲದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಹಿಳೆಯ ಮಾನಭಂಗಕ್ಕೆ ಯತ್ನ ಆರೋಪ; ಪ್ರಕರಣ ದಾಖಲು

ವಿಟ್ಲದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಹಿಳೆಯ ಮಾನಭಂಗಕ್ಕೆ ಯತ್ನ ಆರೋಪ; ಪ್ರಕರಣ ದಾಖಲು

- Advertisement -
- Advertisement -

ವಿಟ್ಲ; ಮಹಿಳೆಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಭಂಗಕ್ಕೆ ಯತ್ನಿಸಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ಷುಲ್ಲಕ ಕಾರಣ ನೆರೆಹೊರೆಯ ಎರಡು ಕುಟುಂಬಗಳ ನಡುವೆ ಜಗಳ ನಡೆದಿದೆ. ಈ ವೇಳೆ ಮಹಿಳೆಯ ಮಾನಭಂಗಕ್ಕೆ ಯತ್ನಿಸಿ  ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಕಂಬಳಬೆಟ್ಟು ಕಾಂಪ್ಲೆಕ್ಸ್ ನಲ್ಲಿ ವಾಸವಿರುವ ಜೈನುಲ್ ಅಬೀದ್ ಅವರ ಪತ್ನಿ ಆಯಿಶತ್ ಮುಬೀನಾ ಅವರು ವಿಟ್ಲ‌ ಪೊಲೀಸರಿಗೆ ದೂರು ನೀಡಿದ್ದಾರೆ.  ಮುಬೀನಾ ಅವರು ವಾಸಿಸುವ ಕಾಂಪ್ಲೆಕ್ಸ್ ನಲ್ಲೇ ವಾಸವಿರುವ ಹನ್ನತ್, ಆಕೆಯ ಸಹೋದರಿ, ಆಕೆಯ ತಾಯಿ, ಹಾಗೂ ಹನ್ನತ್ ಮಾವನ ವಿರುದ್ಧ ಮಾನಭಂಗ ಯತ್ನ ಪ್ರಕರಣ ದಾಖಲಿಸಿದ್ದಾರೆ.

ವಿಟ್ಲಮುಡ್ನೂರು ಗ್ರಾಮದ ಕಂಬಳಬೆಟ್ಟು ಕಾಂಪ್ಲೆಕ್ಸ್ ನಲ್ಲಿ ವಾಸವಿರುವ ಮುಬೀನಾ ತನ್ನ ತವರು ಮನೆಗೆ ಹೋಗಲು ಹೊರಡುತ್ತಿದ್ದಾಗ ನೆರೆ ಮನೆಯ ನಿವಾಸಿ ಹನ್ನತ್ ಮಗಳಾದ ಮಹದಿಗೆ ಕೆಟ್ಟ ಶಬ್ದಗಳಿಂದ ಬೈಯುತ್ತಿದ್ದರು. ಈ ಬಗ್ಗೆ ವಿಚಾರಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿ ಹನ್ನತ್ ನ ಮಾವ ಮೈಮೇಲೆ ಕೈ ಹಾಕಿ ಬುರ್ಖಾವನ್ನು ಹರಿದು ಹಾಕಿ, ಮಾನಭಂಗ ಯತ್ನಿಸಿದ್ದು ಆ ಸಮಯ ಮುಬೀನಾ ನೆಲಕ್ಕೆ ಬಿದ್ದಾಗ ಹೊಟ್ಟೆಗೆ ಹನ್ನತ್ ಮತ್ತು ಆಕೆಯ ತಾಯಿ ಕಾಲಿನಿಂದ ತುಳಿದು ಗಾಯಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಸದ್ಯ ಗಾಯಾಳು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Latest News

error: Content is protected !!