Friday, June 5, 2026
Homeಕರಾವಳಿಕಡಬ; ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆ ಜೊತೆ ಅಸಭ್ಯ ವರ್ತನೆ

ಕಡಬ; ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆ ಜೊತೆ ಅಸಭ್ಯ ವರ್ತನೆ

- Advertisement -
- Advertisement -

ಕಡಬ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಪ್ರಶ್ನಿಸಿದ್ದಕ್ಕೆ  ಮಹಿಳೆ ಹಾಗೂ ಆಕೆಯ ಪತಿಗೆ ಬೆದರಿಕೆ ಹಾಕಿದ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಬದ ಮಹಿಳೆಯೊಬ್ಬರು ಪ್ರತೀದಿನ  ನೆಲ್ಯಾಡಿಯಿಂದ ಮಂಗಳೂರಿಗೆ ಕೆಲಸಕ್ಕೆಂದು ಹೋಗಿ ಬರುತ್ತಿದ್ದು, ಕಳೆದ ಕೆಲದಿನಗಳಿಂದ ಕೆಲಸ ಮುಗಿಸಿ ಮನೆಗೆ ಹೋಗುವ ವೇಳೆ ನೆಲ್ಯಾಡಿಯಲ್ಲಿದ್ದ ವೇಳೆ ಪರಿಚಿತ ವ್ಯಕ್ತಿ ಲಕ್ಷ್ಮೀನಾರಾಯಣ ಎಂಬಾತ ತನ್ನ ಜೊತೆ ಅನುಚಿತವಾಗಿ ವರ್ತಿಸಿದ್ದ. ಈ ಬಗ್ಗೆ  ಮಹಿಳೆ ಮತ್ತು ಆಕೆಯ ಪತಿ ವ್ಯಕ್ತಿಯ ಮನೆಗೆ ಹೋಗಿ ವಿಚಾರಿಸಿದಾಗ ಆತ  ತಲವಾರನ್ನು ತೋರಿಸಿ ಕೊಲ್ಲುವುದಾಗಿ ಜೀವಬೆದರಿಕೆ ಒಡ್ಡಿದ್ದಾನೆ ಅಲ್ಲದೇ ನನ್ನ ಬಟ್ಟೆಯನ್ನು ಹರಿದು ನನ್ನ ಪತಿಗೆ  ಹಲ್ಲೆ ಮಾಡಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಮಹಿಳೆ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ  ಲಕ್ಷ್ಮೀನಾರಾಯಣ  ವಿರುದ್ದ  ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!