Friday, June 5, 2026
Homeತಾಜಾ ಸುದ್ದಿನಟ ಉಪೇಂದ್ರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲು

ನಟ ಉಪೇಂದ್ರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲು

- Advertisement -
- Advertisement -

ಬೆಂಗಳೂರು: ನಟ ಉಪೇಂದ್ರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ.ದಲಿತ ಸಮುದಾಯವನ್ನು ನಿಂದಿಸಿದ ಆರೋಪದ ಮೇಲೆ ನಟ ಉಪೇಂದ್ರ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್‌ ಅವರು ಬೆಂಗಳೂರಿನ ಚೆನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಉಪೇಂದ್ರ ಅವರ ಮೇಲೆ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಯುತ್ತಿದೆ

ಇನ್ನು ಲೈವ್ ವಿಡಿಯೋನಲ್ಲಿ ಮಾತನಾಡಿದ್ದ ನಟ ಉಪೇಂದ್ರ ಯಾವುದೋ ಮಾತಿಗೆ ಊರೆಂದರೆ ಹೊಲೆಗೇರಿ ಇದ್ದೇ ಇರುತ್ತದೆ ಎಂದು ಹೊಲೆಗೇರಿಯನ್ನು ತುಚ್ಛವಾಗಿ ಕಾಣುವ ಗಾದೆಯೊಂದನ್ನು ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವಿರೋಧ ವ್ಯಕ್ತವಾಗಿತ್ತು.ಇದರ ಬೆನ್ನಲ್ಲೇ ಉಪ್ಪಿ ಕ್ಷಮೆ ಕೂಡ ಕೇಳಿದ್ರು.

- Advertisement -

Latest News

error: Content is protected !!