Wednesday, June 3, 2026
Homeಕರಾವಳಿಸುಳ್ಯ; ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

ಸುಳ್ಯ; ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವು

- Advertisement -
- Advertisement -

ಸುಳ್ಯ; ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಸುಳ್ಯದಲ್ಲಿ ನಡೆದಿದೆ.ಸುಳ್ಯ ಶಾಂತಿನಗರ ನಿವಾಸಿ ಸಂಜೀವ ಎಂಬುವರ ಪುತ್ರ ಶ್ರೀಜಿತ್ (17 ) ಮೃತ ವಿದ್ಯಾರ್ಥಿ.

ಶ್ರೀಜಿತ್ ಗೆ  ಕಳೆದ ಎರಡು ದಿನಗಳ ಹಿಂದೆಯಷ್ಟೇ ಹೊಟ್ಟೆ ನೋವು ಕಾಣಿಸಿಕೊಂಡಿತ್ತು,ಅದು ಉಲ್ಬಣಗೊಂಡು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕನಿಗೆ ಕೂಡಲೇ ಶಸ್ತ್ರಚಿಕಿತ್ಸೆ ನಡೆಸಬೇಕೆಂದು ವೈದ್ಯರು ಹೇಳಿದ್ದು, ಆತನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಮನೆಯವರು ದಾಖಲಿಸಿದ್ದರು. ಅಲ್ಲಿ ಶ್ರೀಜಿತ್ ಸ್ಥಿತಿ ಮತ್ತಷ್ಟು ಬಿಗಡಾಯಿಸಿದ್ದರಿಂದ ನಿನ್ನೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಮ್.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ.

ಶ್ರೀಜಿತ್  ತಂದೆ ಸಂಜೀವ, ತಾಯಿ ಪ್ರೇಮ, ಸಹೋದರ ಶ್ರೀನಿತ್ ಸೇರಿದಂತೆ ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾನೆ. ಇನ್ನು ಪುತ್ತೂರು ಖಾಸಗಿ ಆಸ್ಪತ್ರೆ ವೈದ್ಯರೇ ನಮ್ಮ ಮಗನ ಸಾವಿಗೆ ಕಾರಣವೆಂದು ಪೋಷಕರು ಆರೋಪ ಮಾಡಿದ್ದು ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

- Advertisement -

Latest News

error: Content is protected !!