Friday, June 5, 2026
Homeಕರಾವಳಿಉಪ್ಪಿನಂಗಡಿ; ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ಉಪ್ಪಿನಂಗಡಿ; ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

- Advertisement -
- Advertisement -

ಉಪ್ಪಿನಂಗಡಿ; ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ
34ನೇ ನೆಕ್ಕಿಲಾಡಿ ಗ್ರಾಮದಲ್ಲಿ ನಡೆದಿದೆ.

ಶೀಲಾ ಎಂಬವರ ಮನೆಗೆ ನುಗ್ಗಿದ ಕಳ್ಳರು  2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕದ್ದೊಯ್ದಿದ್ದಾರೆ.
ಶೀಲಾ ಅವರು ಚಿಕಿತ್ಸೆಗಾಗಿ ಗಂಡನನ್ನು ಮನೆಗೆ ಬೀಗ ಹಾಕಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಮಧ್ಯಾಹ್ನ ಹಿಂದಿರುಗಿ ಬಂದಾಗ ಮನೆಯ ಬಾಗಿಲು ತೆರೆದಿದ್ದು, ಮನೆಯೊಳಗಿದ್ದ ಕಪಾಟಿನ ಬಾಗಿಲು ತೆರೆಯಲ್ಪಟ್ಟು ಅದರಲ್ಲಿದ್ದ 2.50 ಲಕ್ಷ ರೂ.ಗೂ ಅಧಿಕ ಮೊತ್ತದ ಎಂಟೂವರೆ ಪವನ್‌ ತೂಕದ ಚಿನ್ನವನ್ನು ಕಳ್ಳರು ಕದ್ದೊಯ್ದಿದ್ದರು.

ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!