Friday, June 5, 2026
Homeತಾಜಾ ಸುದ್ದಿಆಪರೇಷನ್ ಹಸ್ತಗೆ ವಿರೋಧ; ರಾಜಕೀಯ ನಿವೃತ್ತಿಗೆ ಮುಂದಾದ ಮಾಜಿ ಸಚಿವ ತನ್ವೀರ್ ಸೇಠ್

ಆಪರೇಷನ್ ಹಸ್ತಗೆ ವಿರೋಧ; ರಾಜಕೀಯ ನಿವೃತ್ತಿಗೆ ಮುಂದಾದ ಮಾಜಿ ಸಚಿವ ತನ್ವೀರ್ ಸೇಠ್

- Advertisement -
- Advertisement -

ಮೈಸೂರು: ಕಾಂಗ್ರೆಸ್ ನಲ್ಲಿ ಆಪರೇಷನ್ ಹಸ್ತ ಕೂಗು ಜೋರಾಗಿರುವ  ಬೆನ್ನಲ್ಲೇ ಆಪರೇಷನ್ ಹಸ್ತಕ್ಕೆ ಮಾಜಿ ಸಚಿವ ತನ್ವೀರ್ ಸೇಠ್ ವಿರೋಧ ವ್ಯಕ್ತ ಪಡಿಸಿದ್ದು, ರಾಜಕೀಯ ನಿವೃತ್ತಿಗೂ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು ಈಗಿನ ರಾಜಕೀಯ ಸನ್ನಿವೇಶ, ಪರಿಸ್ಥಿತಿ ಯಾವುದೂ ಸರಿಯಿಲ್ಲ. ಹೀಗಾಗಿ ನಾನು ರಾಜಕೀಯ ನಿವೃತ್ತಿಗೆ ಮುಂದಾಗಿದ್ದೇನೆ ಎಂದಿದ್ದಾರೆ. ಈ ಮೂಲಕ ಆಪರೇಷನ್ ಹಸ್ತಕ್ಕೆ ಪರೋಕ್ಷವಾಗಿ ಅವರು ಅಸಮಾಧಾನ ಹೊರ ಹಾಕಿದ್ದಾರೆ.

ಇನ್ನೂ ಮುಂದುವರೆದು ಮಾತನಾಡಿದಂತ ಅವರು ಪಕ್ಷಾಂತರ ಮಾಡುವವರ ವಿರುದ್ಧ ಎಷ್ಟೇ ಕಾನೂನು ಬಿಗಿ ಮಾಡಿದರೂ ರಾಜೀನಾಮೆ ನೀಡಿ, ಚುನಾವಣೆಗೆ ಹೋಗುವವರಿಗೆ ಏನೂ ಮಾಡೋದಕ್ಕೆ ಆಗುತ್ತಿಲ್ಲ. ನಾವು ಯಾವುದೇ ಆಪರೇಷನ್ ಗೆ ಕೈಹಾಕಲ್ಲ. ನಮಗೆ ರಾಜ್ಯದ ಜನತೆ 135 ಸ್ಥಾನ ಕೊಟ್ಟಿದ್ದಾರೆ ಎಂದು ಹೇಳಿದರು.

- Advertisement -

Latest News

error: Content is protected !!