Saturday, June 13, 2026
Homeಕರಾವಳಿಸರ್ವ ಪಕ್ಷ ಸಭೆಗೆ ಸಂಸದ ನಳೀನ್ ಕುಮಾರ್ ಕಟೀಲ್ ಗೈರು

ಸರ್ವ ಪಕ್ಷ ಸಭೆಗೆ ಸಂಸದ ನಳೀನ್ ಕುಮಾರ್ ಕಟೀಲ್ ಗೈರು

- Advertisement -
- Advertisement -

ಬೆಂಗಳೂರು: ಕಾವೇರಿ ಮತ್ತು ಮಹದಾಯಿ ವಿಚಾರವಾಗಿ ಬೆಂಗಳೂರಿನಲ್ಲಿ ಇಂದು ನಡೆದ ಸರ್ವಪಕ್ಷಗಳ ಸಭೆಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಗೈರಾಗಿದ್ದಾರೆ.

ಕಾವೇರಿ ಮತ್ತು ಮಹದಾಯಿ ನೀರು ಹಂಚಿಕೆ ವಿಚಾರವಾಗಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷ ಸಭೆ ಕರೆಯಲಾಗಿತ್ತು.

ನಳೀನ್ ಕುಮಾರ್ ಕಟೀಲ್ ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಸರ್ವ ಪಕ್ಷ ಸಭೆಗೆ ಗೈರಾಗಿದ್ದು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ ಕಟೀಲ್ ಪರವಾಗಿ ಸಭೆಗೆ ಹಾಜರಾಗಿದ್ದರು.‌

ರಾಜ್ಯದ ಎಲ್ಲಾ ಮಾಜಿ ಮುಖ್ಯಮಂತ್ರಿಗಳು, ರಾಜಕೀಯ ಪಕ್ಷಗಳ ರಾಜ್ಯಾಧ್ಯಕ್ಷರು ಮತ್ತು ಸಂಸದರಿಗೆ ಸಭೆಗೆ ಆಹ್ವಾನ ನೀಡಲಾಗಿತ್ತು.

- Advertisement -

Latest News

error: Content is protected !!