Saturday, June 6, 2026
Homeಕರಾವಳಿಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ:ಆಗಸ್ಟ್ 26 ರಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಕೆಆರ್ ಎಸ್...

ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ:ಆಗಸ್ಟ್ 26 ರಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಕೆಆರ್ ಎಸ್ ಪಕ್ಷದಿಂದ ಪಾದಯಾತ್ರೆ

- Advertisement -
- Advertisement -

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಬೆಳ್ತಂಗಡಿಯಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

ಕೆಆರ್ ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿ ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಪಾದಯಾತ್ರೆ ಬಗ್ಗೆ ಘೋಷಣೆ ಮಾಡಿದ್ದಾರೆ. ಆಗಸ್ಟ್ 26 ರಂದು ಪಾದಯಾತ್ರೆ ಆರಂಭವಾಗಲಿದೆ.

ಹದಿನಾಲ್ಕು ದಿನಗಳ ಕಾಲ ನಡೆಯಲಿರುವ ಪಾದಯಾತ್ರೆ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಮಂಡ್ಯ, ತುಮಕೂರು, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಮೂಲಕ ಸಾಗಲಿದೆ.

ಸೆಪ್ಟೆಂಬರ್ 7 ರಂದು ಬೆಂಗಳೂರಿಗೆ ತಲುಪಲಿರುವ ಪಾದಯಾತ್ರೆ 8 ರಂದು ವಿಧಾನಸೌಧ ತಲುಪಲಿದೆ. ಸುಮಾರು 330 ಕಿಲೋ ಮೀಟರ್ ದೂರ ಪಾದಯಾತ್ರೆ ನಡೆಯಲಿದೆ.

- Advertisement -

Latest News

error: Content is protected !!