Thursday, June 4, 2026
HomeUncategorizedಮೂಡಬಿದಿರೆಯಲ್ಲಿ ವಿದ್ಯಾರ್ಥಿ ಮೇಲೆ ನೈತಿಕ ಪೊಲೀಸ್ ಗಿರಿ ಪ್ರಕರಣ: ಮೂವರು ಆರೋಪಿಗಳು ಪೊಲೀಸರಿಂದ ಅರೆಸ್ಟ್

ಮೂಡಬಿದಿರೆಯಲ್ಲಿ ವಿದ್ಯಾರ್ಥಿ ಮೇಲೆ ನೈತಿಕ ಪೊಲೀಸ್ ಗಿರಿ ಪ್ರಕರಣ: ಮೂವರು ಆರೋಪಿಗಳು ಪೊಲೀಸರಿಂದ ಅರೆಸ್ಟ್

- Advertisement -
- Advertisement -

ಮೂಡಬಿದಿರೆ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ ಮೂಡಬಿದಿರೆಯಲ್ಲಿ
ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅಭಿಲಾಷ್, ಪ್ರೇಮ್ ಭಂಡಾರಿ ಮತ್ತು ಸಂಜಯ್ ಎಂಬವರು ಬಂಧಿತರಾಗಿದ್ದು, ಮೂಡಬಿದಿರೆಯ ರಾಜೀವ ಗಾಂಧಿ ಸಂಕೀರ್ಣದ ಎದುರು ವಿದ್ಯಾರ್ಥಿನಿ ಜೊತೆ ಮಾತನಾಡಿದ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದರು.

ಆಗಸ್ಟ್ 22 ಹಲ್ಲೆ ಘಟನೆ ನಡೆದಿದ್ದು, ಪ್ರಕರಣ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಮೂಡಬಿದಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಬೆಂಗಳೂರಿಗೆ ಹೋಗಲು ಬಂದಿದ್ದಾಗ ವಿದ್ಯಾರ್ಥಿ ಆಕೆಯೊಂದಿಗೆ ಮಾತನಾಡಿದ್ದಾನೆ ಎನ್ನಲಾಗಿದೆ.

ವಿದ್ಯಾರ್ಥಿನಿ ಬಸ್ ಹತ್ತಿದ ಬಳಿಕ ವಿದ್ಯಾರ್ಥಿಗೆ ಅರೋಪಿಗಳು ಹಲ್ಲೆ ನಡೆಸಿದ್ದು, ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!