Saturday, June 6, 2026
Homeಕರಾವಳಿಕಾಸರಗೋಡುಕಾಸರಗೋಡಿನಲ್ಲಿ 4 ವರ್ಷದ ಬಾಲಕಿಯನ್ನು ಬಲಿ ಪಡೆದ ಶಾಲಾ ಬಸ್

ಕಾಸರಗೋಡಿನಲ್ಲಿ 4 ವರ್ಷದ ಬಾಲಕಿಯನ್ನು ಬಲಿ ಪಡೆದ ಶಾಲಾ ಬಸ್

- Advertisement -
- Advertisement -

ಕಾಸರಗೋಡು;ಶಾಲಾ ಬಸ್ ನಡಿಗೆ ಬಿದ್ದು ನಾಲ್ಕು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಇಂದು ಕಾಸರಗೋಡಿನ ಕಂಬಾರ್ ಸಿರಿಬಾಗಿಲು ಎಂಬಲ್ಲಿ ನಡೆದಿದೆ.ಸಿರಿಬಾಗಿಲಿನ ಮುಹಮ್ಮದ್ ಸುಬೈರ್ ರವರ ಪುತ್ರಿ ಆಯಿಷಾ ಸೆಯಾ(4) ಮೃತ ಬಾಲಕಿ.

ಶಾಲೆ ಬಿಟ್ಟು ಮನೆ ಬಳಿ ಬಾಲಕಿಯನ್ನು ಇಳಿಸಿ ಬಸ್ಸನ್ನು ಹಿಂದಕ್ಕೆ ತೆಗೆಯುತ್ತಿದ್ದಾಗ ಅದೇ ಬಸ್ಸಿನಡಿ ಸಿಲುಕಿ ಬಾಲಕಿ ಮೃತಪಟ್ಟಿದ್ದಾಳೆ.ಬಾಲಕಿಯನ್ನು ಸ್ಥಳೀಯರು ಕೂಡಲೇ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಬಾಲಕಿ ಮೃತಪಟ್ಟಿದ್ದಳು.ಕಾಸರಗೋಡು ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!