Thursday, June 4, 2026
Homeಕರಾವಳಿದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಎನ್.ಎಸ್. ಹರ್ಡೀಕರ್ ಪುಣ್ಯತಿಥಿ ಆಚರಣೆ

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಎನ್.ಎಸ್. ಹರ್ಡೀಕರ್ ಪುಣ್ಯತಿಥಿ ಆಚರಣೆ

- Advertisement -
- Advertisement -

ಮಂಗಳೂರು: ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯ ನಡೆಯಿತು.

ಸಭೆಯ ಆರಂಭಕ್ಕೂ ಮುನ್ನ ಸೇವಾದಳದ ಸಂಸ್ಥಾಪಕರಾದ ಡಾ. ಎನ್.ಎಸ್ ಹರ್ಡೀಕರ್ ರವರ ಪುಣ್ಯತಿಥಿ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ನ ಸರ್ಕಾರಿ ಮುಖ್ಯ ಸಚೇತಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹರ್ಡೀಕರ್ ಭಾವಚಿತ್ರಕ್ಕೆ ಪುಷ್ಪನಮನ ಮಾಡಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್, ಮಾಜಿ ಸಚಿವ ರಮಾನಾಥ ರೈ, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಜೆ.ಆರ್. ಲೋಬೋ, ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಸೇರಿದಂತೆ ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಜಿಲ್ಲಾ ಕಾಂಗ್ರೆಸ್ ಘಟಕಾಧ್ಯಕ್ಷರುಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!