Friday, June 5, 2026
Homeತಾಜಾ ಸುದ್ದಿಫೇಸ್ ಬುಕ್ ನಲ್ಲಿ ವೈಯಕ್ತಿಕ ತೇಜೋವಧೆ ಆರೋಪ:ಯುವ ಬ್ರಿಗೇಡ್ ಮುಖಂಡ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್...

ಫೇಸ್ ಬುಕ್ ನಲ್ಲಿ ವೈಯಕ್ತಿಕ ತೇಜೋವಧೆ ಆರೋಪ:ಯುವ ಬ್ರಿಗೇಡ್ ಮುಖಂಡ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ ಐಆರ್

- Advertisement -
- Advertisement -

ಶಿವಮೊಗ್ಗ: ಫೇಸ್ ಬುಕ್ ನಲ್ಲಿ ಅವಹೇಳನ ಮಾಡಿದ ಆರೋಪದ ಅಡಿಯಲ್ಲಿ ಯುವ ಬ್ರಿಗೇಡ್ ಮುಖಂಡ ಮತ್ತು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಶಿವಮೊಗ್ಗದ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲ್ಪಟ್ಟಿದ್ದು ಪೊಲೀಸರು ಎಫ್ ಐಆರ್ ದಾಖಲು ಮಾಡಿಕೊಂಡಿದ್ದಾರೆ.

ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಉಪಾಧ್ಯಕ್ಷೆ ಸೌಗಂಧಿಕಾ ರಘುನಾಥ್ ಎಂಬವರು ಫೇಸ್ ಬುಕ್ ನಲ್ಲಿ ವೈಯಕ್ತಿಕ ತೇಜೋವಧೆ ಮಾಡಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಿಸಿದ್ದಾರೆ.

ಇಂದು ಸೌಂಗಧಿಕಾ ಅವರು ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತೆಯರೊಂದಿಗೆ ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ.ದೂರು ಸ್ವೀಕರಿಸಿರುವ ಪೊಲೀಸರು ಐಪಿಸಿ ಸೆಕ್ಷನ್ 504 ಮತ್ತು 509 ರ ಅಡಿಯಲ್ಲಿ ಎಫ್ ಐಆರ್ ದಾಖಲು ಮಾಡಿಕೊಂಡಿದ್ದಾರೆ.

- Advertisement -

Latest News

error: Content is protected !!