Monday, June 8, 2026
Homeಕರಾವಳಿಉಡುಪಿಕುಂದಾಪುರ: ಅಕ್ರಮ ಮರಳುಗಾರಿಕೆ ಅಡ್ಡೆಗೆ ಪೊಲೀಸ್ ದಾಳಿ, ಮೂರು ವಾಹನ ವಶ

ಕುಂದಾಪುರ: ಅಕ್ರಮ ಮರಳುಗಾರಿಕೆ ಅಡ್ಡೆಗೆ ಪೊಲೀಸ್ ದಾಳಿ, ಮೂರು ವಾಹನ ವಶ

- Advertisement -
- Advertisement -

ಕುಂದಾಪುರ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿರುವ ಗಂಗೊಳ್ಳಿ ಠಾಣೆ ಪೊಲೀಸರು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಕುಂದಾಪುರ ತಾಲೂಕಿನ ತ್ರಾಸಿ ಮತ್ತು ಮೊವಾಟಿ ಪ್ರದೇಶದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ದಾಳಿ ನಡೆದಿದೆ.

ಮರಳು ಸಾಗಾಟಕ್ಕಾಗಿ ಬಳಸುತ್ತಿದ್ದ ಮೂರು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸ್ಥಳೀಯ ನಿವಾಸಿಗಳಿಂದ ಪೊಲೀಸ್ ಠಾಣೆಗೆ ದೂರು ಹಿನ್ನಲೆಯಲ್ಲಿ ದಾಳಿ ನಡೆದಿದೆ.

ಅಕ್ರಮ ಮರಳುಗಾರಿಕೆಯ ಕುರಿತು ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!