Saturday, June 13, 2026
Homeಕರಾವಳಿಉಳ್ಳಾಲದ ವೃದ್ಧೆಯನ್ನು ಬಲಿಪಡೆದ ಕೊರೊನಾ

ಉಳ್ಳಾಲದ ವೃದ್ಧೆಯನ್ನು ಬಲಿಪಡೆದ ಕೊರೊನಾ

- Advertisement -
- Advertisement -

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ತನ್ನ ಸಾವಿನ ಸವಾರಿಯನ್ನು ಮುಂದುವರೆಸಿದೆ. ನಿನ್ನೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಮೂರು ಬಲಿಯಾಗಿದ್ದರು. ಅದರ ಬೆನ್ನಲ್ಲೇ ಇವತ್ತು ವೃದ್ಧೆಯೊಬ್ಬರು ಕೋವಿಡ್ -19ಗೆ ಬಲಿಯಾಗಿದ್ದಾರೆ.

ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಳ್ಳಾಲದ 60 ವರ್ಷದ ವೃದ್ಧೆ ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೋನಾಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೇರಿದೆ. ಉಳ್ಳಾಲ ನಿವಾಸಿ ವೃದ್ಧೆ ಕೆಲವು ದಿನಗಳ ಹಿಂದೆ ಸೋಂಕಿಗೆ ತುತ್ತಾಗಿದ್ದು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಆಕೆಯನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಜೊತೆಗೆ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದ್ದು ಜನರಲ್ಲಿ ಆತಂಕ ಹೆಚ್ಚಿಸಿದೆ.

- Advertisement -

Latest News

error: Content is protected !!