- Advertisement -
![]()
- Advertisement -
ಉಡುಪಿ: ಅಪಘಾತದಲ್ಲಿ ಗಾಯಗೊಂಡಿದ್ದ ಓರ್ವ ವಿದ್ಯಾರ್ಥಿಗೆ ಆಟೋ ಮೂಲಕ ಆಸ್ಪತ್ರೆಗೆ ಸಾಗಿಸಲು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೆರವಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕ್ರಾಸ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿಯೊಬ್ಬನಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲೇ ಗಾಯಗೊಂಡು ನರಳುತ್ತಿದ್ದನು.
ಕಾಪು ತಾಲೂಕಿನ ಪಣಿಯೂರಿನ ಬೆಳಪು ವ್ಯವಸಾಯ ಸಹಕಾರ ಸಂಘದ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ಸಹಕಾರಿ ಮಹಲ್ ನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ಸಚಿವರು ಉಡುಪಿಯತ್ತ ಬರುತ್ತಿದ್ದ ವೇಳೆ ಅದೇ ಮಾರ್ಗದಲ್ಲಿ ಅಪಘಾತ ಸಂಭವಿಸಿತ್ತು.
ಗಾಯಗೊಂಡಿದ್ದ ವಿದ್ಯಾರ್ಥಿಯ ನರಳಾಟವನ್ನು ಕಂಡು ಲಕ್ಷ್ಮೀ ಹೆಬ್ಬಾಳಕ್ಕರ್, ತಕ್ಷಣವೇ ಕಾರನ್ನು ನಿಲ್ಲಿಸಿ ವಿದ್ಯಾರ್ಥಿಗೆ ಉಪಚರಿಸಿ ಬಳಿಕ ಆಟೋವೊಂದರಲ್ಲಿ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕಳುಹಿಸಿದರು.
- Advertisement -


