Wednesday, June 3, 2026
Homeತಾಜಾ ಸುದ್ದಿಕರಾವಳಿ ಪ್ರವಾಸೋದ್ಯಮ ಸದ್ಭಳಕೆ ಕುರಿತು ವರದಿ ಸಲ್ಲಿಕೆಗೆ ಸಚಿವರ ಸೂಚನೆ

ಕರಾವಳಿ ಪ್ರವಾಸೋದ್ಯಮ ಸದ್ಭಳಕೆ ಕುರಿತು ವರದಿ ಸಲ್ಲಿಕೆಗೆ ಸಚಿವರ ಸೂಚನೆ

- Advertisement -
- Advertisement -

ಬೆಂಗಳೂರು: ಕರಾವಳಿಯ ಪ್ರವಾಸೋದ್ಯಮ ಸಾಮರ್ಥ್ಯದ ಸದ್ಭಳಕೆ ಕುರಿತಂತೆ ಸಮಗ್ರ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪ್ರವಾಸೋದ್ಯಮ ಸಾಮರ್ಥ್ಯದ ಸದ್ಬಳಕೆಗೆ ಹೆಚ್ಚಿನ ಹಣಕಾಸಿನ ಹೂಡಿಕೆ ಬೇಕಾಗುವುದರಿಂದ ಬಂಡವಾಳ ಆಕರ್ಷಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆಯೂ ಸಮಗ್ರ ವರದಿ ಸಲ್ಲಿಸುವಂತೆ ಸಚಿವರು ನಿರ್ದೇಶನ ನೀಡಿದರು.

ಕರ್ನಾಟಕದಲ್ಲಿ 300 ಕಿಲೋ ಮೀಟರ್ ಗೂ ಹೆಚ್ಚಿನ ಕರಾವಳಿ ಇದ್ದು, ಇಲ್ಲಿಯೂ ಪರಿಸರ ಪ್ರವಾಸೋದ್ಯಮಕ್ಕೆ ಅವಕಾಶಗಳು ಹೆಚ್ಚಾಗಿವೆ.

ಬೆಂಗಳೂರಿನಲ್ಲಿ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಸಭೆ ನಡೆಸಿದ ಸಚಿವರು, ಪರಿಸರ ಪ್ರವಾಸೋದ್ಯಮಕ್ಕೆ ಹೊಸ ನೀತಿ ರೂಪಿಸುವಂತೆ ನಿರ್ದೇಶನ ನೀಡಿದ್ದಾರೆ.

ಸಭೆಯಲ್ಲಿ ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆಯ ಅಧಿಕಾರಿಗಳು ಮತ್ತು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

- Advertisement -

Latest News

error: Content is protected !!