Wednesday, June 3, 2026
Homeಕರಾವಳಿಇಂದು ಸೌಜನ್ಯಳಿಗೆ ನ್ಯಾಯಕ್ಕಾಗಿ ಮಹೇಶ್ ತಿಮರೋಡಿ ನೇತೃತ್ವದಲ್ಲಿ ಪ್ರತಿಭಟನೆ ಹಿನ್ನೆಲೆ;ಬೆಳ್ತಂಗಡಿಯಲ್ಲಿ ಇಂದು ಸಂಚಾರದಲ್ಲಿ ಬದಲಾವಣೆ

ಇಂದು ಸೌಜನ್ಯಳಿಗೆ ನ್ಯಾಯಕ್ಕಾಗಿ ಮಹೇಶ್ ತಿಮರೋಡಿ ನೇತೃತ್ವದಲ್ಲಿ ಪ್ರತಿಭಟನೆ ಹಿನ್ನೆಲೆ;ಬೆಳ್ತಂಗಡಿಯಲ್ಲಿ ಇಂದು ಸಂಚಾರದಲ್ಲಿ ಬದಲಾವಣೆ

- Advertisement -
- Advertisement -

ಬೆಳ್ತಂಗಡಿ: ಇಂದು ಸೌಜನ್ಯಳಿಗೆ ನ್ಯಾಯಕ್ಕಾಗಿ ಮಹೇಶ್ ತಿಮರೋಡಿ ನೇತೃತ್ವದಲ್ಲಿ ಪ್ರತಿಭಟನೆ ಹಿನ್ನೆಲೆ ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ 73ರ ಮಾರ್ಗ ಬದಲಾವಣೆ ಮಾಡಲಾಗಿದೆ.

ಬೆಳ್ತಂಗಡಿ ಪೇಟೆ ಮೂಲಕ ಹೋಗುವ ಕಡೂರು-ಬಂಟ್ವಾಳ ಹೆದ್ದಾರಿಯಲ್ಲಿ ಸಂಚರಿಸುವ ಎಲ್ಲ ವಾಹನಗಳನ್ನು ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಕೊಯ್ಯೂರು ಕ್ರಾಸ್‌ ರಸ್ತೆಯ ಮೂಲಕ ಆದ್ರುಪೆರಾಲ್‌ ಮುಖಾಂತರ ಪರಪ್ಪು ಗೇರುಕಟ್ಟೆಯಾಗಿ ಮಂಗಳೂರು ಕಡೆಗೆ ಸಂಚರಿಸಲು ಹಾಗೆಯೇ ಮಂಗಳೂರಿನಿಂದ ಉಜಿರೆ ಕಡೆಗೆ ಬರುವ ಎಲ್ಲ ವಾಹನಗಳನ್ನು ಗುರುವಾಯನಕೆರೆಯಲ್ಲಿ, ಉಪ್ಪಿನಂಗಡಿ ರಸ್ತೆ ಮೂಲಕ ಪರಪ್ಪು ಕ್ರಾಸ್‌ನಲ್ಲಿ ಆದ್ರುಪೆರಾಲ್‌ ಮುಖಾಂತರ ಸಂಚರಿಸಲು ಮತ್ತು ಉಳಿದ ಸಣ್ಣ ವಾಹನಗಳನ್ನು ಚರ್ಚ್‌ ಕ್ರಾಸ್‌ನಿಂದ ಕನ್ನಾಜೆ, ಪಡ್ಲಾಡಿ, ಲಾಯಿಲ ಮಾರ್ಗವಾಗಿ ಉಜಿರೆ ಕಡೆ ಸಂಚರಿಸುವಂತೆ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!