Thursday, June 4, 2026
Homeಕರಾವಳಿಬಂಟ್ವಾಳ: ಸಜೀಪಮುನ್ನೂರಿನಲ್ಲಿ ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ

ಬಂಟ್ವಾಳ: ಸಜೀಪಮುನ್ನೂರಿನಲ್ಲಿ ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ

- Advertisement -
- Advertisement -

ಬಂಟ್ವಾಳ: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬಂಟ್ವಾಳದ ಸಜೀಪಮುನ್ನೂರಿನಲ್ಲಿ ನಡೆದಿದೆ.

ಸಜೀಪಮುನ್ನೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಮೈಕಲ್‌ ಡಿ’ಸೋಜಾ ಅವರು ಸೆ.1ರಂದು ಬೆಳಗ್ಗೆ ಮನೆಗೆ ಬೀಗ ಹಾಕಿ ಮಕ್ಕಳ ಜತೆಗೆ ಹೊರ ಹೋಗಿದ್ದರು. ಆದರೆ ಮಧ್ಯಾಹ್ನ 2.45ರ ವೇಳೆಗೆ ಮಗಳು ಮನೆಗೆ ಬಂದು ನೋಡಿದಾಗ ಬಾಗಿಲು ತೆರೆದಿತ್ತು. ಜತೆಗೆ ಕೋಣೆಯ ಕಪಾಟಿನಲ್ಲಿದ್ದ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿದ್ದವು.

ವಿಚಾರ ತಿಳಿದು ಮೈಕಲ್‌ ಅವರು ಮನೆಗೆ ಬಂದಾಗ ಯಾರೋ ಕಳ್ಳರು ಮನೆಯ ಎದುರಿನ ಬಾಗಿಲು ಮುರಿದು ಒಳ ಪ್ರವೇಶಿಸಿ ಕೋಣೆಯಲ್ಲಿದ್ದ 2 ಕಪಾಟುಗಳ ಬಾಗಿಲು ಮುರಿದು 5.36 ಲಕ್ಷ ರೂ. ಮೌಲ್ಯದ 115 ಗ್ರಾಂ. ತೂಕದ ಚಿನ್ನಾಭರಣ, ಬೆಳ್ಳಿಯ ಸಾಮಾಗ್ರಿಗಳು ಹಾಗೂ 3 ಸಾವಿರ ರೂ. ನಗದನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದೆ.

ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!