Friday, June 5, 2026
Homeಕರಾವಳಿಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಹೈಕೋರ್ಟ್ ನಲ್ಲಿ ದಾವೆ:ಮಂಗಳೂರಿನಲ್ಲಿ ಶ್ರೀರಾಮ ಸೇನೆ ಸ್ಥಾಪಕ ಪ್ರಮೋದ್ ಮುತಾಲಿಕ್...

ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಹೈಕೋರ್ಟ್ ನಲ್ಲಿ ದಾವೆ:ಮಂಗಳೂರಿನಲ್ಲಿ ಶ್ರೀರಾಮ ಸೇನೆ ಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿಕೆ

- Advertisement -
- Advertisement -

ಮಂಗಳೂರು: ತಮಿಳುನಾಡು ಸಚಿವ ಉದಯ್ ನಿಧಿ ಸ್ಟಾಲಿನ್ ನೀಡಿದ ಹೇಳಿಕೆಗೆ ಶ್ರೀರಾಮ ಸೇನೆ ಸ್ಥಾಪಕಾಧ್ಯಕ್ಷ ಪ್ರಮೋದ್ ಮುತಾಲಿಕ್ ಅಸಮಾಧಾನ ಹೊರ ಹಾಕಿದ್ದಾರೆ.

ಉದಯ ನಿಧಿ ತನ್ನ ಹೇಳಿಕೆಯನ್ನು ವಾಪಸ್ ಪಡೆದು ಕ್ಷಮೆ ಕೇಳದಿದ್ದರೆ ಕರ್ನಾಟಕ ಹೈಕೋರ್ಟ್ ನಲ್ಲಿ ಉದಯ ನಿಧಿ ವಿರುದ್ಧದ ದಾವೆ ಹೂಡುತ್ತೇವೆ ಎಂದು ಹೇಳಿದ್ದಾರೆ.ಸಚಿವ ಉದಯನಿಧಿ ಅಸಹ್ಯ ಮತ್ತು ಅಸಭ್ಯ ಹೇಳಿಕೆಯ ವಿರುದ್ದ ಶ್ರೀರಾಮ ಸೇನೆ ತಮಿಳುನಾಡಿನಲ್ಲೂ ಪ್ರತಿಭಟನೆ ನಡೆಸಿದ್ದು, ಪೆರಿಯಾರ್ ಸಂಸ್ಕೃತಿಯಿಂದ ಬಂದ ಇವರ ಆಟ ನಡೆಯಲ್ಲ ಎಂದು ಮುತಾಲಿಕ್ ಹೇಳಿದ್ದಾರೆ.

ಸನಾತನ ಧರ್ಮ ಮಲೇರಿಯಾ ಮತ್ತು ಡೆಂಘಿ ಇದ್ದಂತೆ ಎಂದು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಪುತ್ರ ಮತ್ತು ಸಚಿವ ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು.

- Advertisement -

Latest News

error: Content is protected !!