Tuesday, June 9, 2026
Homeಕರಾವಳಿಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ:ಮರು ತನಿಖೆಗೆ ಒತ್ತಾಯಿಸಿ ಬಿಜೆಪಿ ಶಾಸಕರ ನಿಯೋಗದಿಂದ ಸಿಎಂ ಮತ್ತು...

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ:ಮರು ತನಿಖೆಗೆ ಒತ್ತಾಯಿಸಿ ಬಿಜೆಪಿ ಶಾಸಕರ ನಿಯೋಗದಿಂದ ಸಿಎಂ ಮತ್ತು ರಾಜ್ಯಪಾಲರಿಗೆ ಮನವಿ

- Advertisement -
- Advertisement -

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಕರಣದ ಮರು ತನಿಖೆಗೆ ಸಿಎಂ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ಧರಾಮಯ್ಯ ಭೇಟಿ ಮಾಡಿದ ಹನ್ನೊಂದು ಶಾಸಕರ ನಿಯೋಗ, ಬಳಿಕ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಿದೆ.

ಪ್ರಕರಣದ ಮರು ತನಿಖೆ ಮಾಡುವಂತೆ ಸಿಎಂ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ.

- Advertisement -

Latest News

error: Content is protected !!