Wednesday, October 14, 2026
Homeಕರಾವಳಿಬಂಟ್ವಾಳ : ಪಾದಾಚಾರಿಗೆ ರಿಕ್ಷಾ ಡಿಕ್ಕಿ ಹೊಡೆದು ಗಾಯ

ಬಂಟ್ವಾಳ : ಪಾದಾಚಾರಿಗೆ ರಿಕ್ಷಾ ಡಿಕ್ಕಿ ಹೊಡೆದು ಗಾಯ

- Advertisement -
- Advertisement -

ಬಂಟ್ವಾಳ : ತರಕಾರಿ ತೆಗೆದುಕೊಂಡು ರಸ್ತೆ ದಾಟುತ್ತಿದ್ದಾಗ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಗಾಯಗೊಂಡ ಘಟನೆ  ಬಿಸಿರೋಡಿನ ಕೈಕಂಬ ಎಂಬಲ್ಲಿ ನಡೆದಿದೆ.ಇರಾ ನಿವಾಸಿ ಅಬ್ದುಲ್ ರಹಿಮಾನ್ ಗಾಯಗೊಂಡ ವ್ಯಕ್ತಿ.

ರಹಿಮಾನ್ ಎಂಬವರು ಮುಂಜಾನೆ ಸುಮಾರು 5.30 ಗಂಟೆಗೆ ಕೈಕಂಬ ಎಂಬಲ್ಲಿ ಅಂಗಡಿಯೊಂದರಿಂದ ತರಕಾರಿ ಪಡೆದುಕೊಂಡು ರಸ್ತೆ ದಾಟುತ್ತಿದ್ದ ವೇಳೆ ಅತೀವೇಗ ಮತ್ತು ನಿರ್ಲಕ್ಷ್ಯತನದಿಂದ ರಿಕ್ಷಾವನ್ನು ಚಲಾಯಿಸಿಕೊಂಡು ಬಂದ ಚಾಲಕ ಇಮ್ತಿಯಾಜ್ ಡಿಕ್ಕಿ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ. ಪರಿಣಾಮ ರಸ್ತೆ ದಾಟುತ್ತಿದ್ದ ರಹಿಮಾನ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Latest News

error: Content is protected !!