Thursday, June 4, 2026
Homeಕರಾವಳಿಉಡುಪಿಕಾರ್ಕಳ: ಶಾಲಾ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗೆ ಹೊಡೆದ ಆರೋಪ; ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲು

ಕಾರ್ಕಳ: ಶಾಲಾ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗೆ ಹೊಡೆದ ಆರೋಪ; ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಕಾರ್ಕಳ: ಶಾಲಾ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗೆ ಪ್ರಾಂಶುಪಾಲರು ಹೊಡೆದಿದ್ದಾರೆ ಎಂದು ಪ್ರಿನ್ಸ್ ಪಾಲ್  ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.

ಮೈಸೂರು ಮೂಲದ ವೆರೋನಿಕಾ ಎಂಬವರ ಮಕ್ಕಳಾದ ಆಯಂಟೋನಿ ಜೀವನ್ ಹಾಗೂ ಮರಿಯನ್ ಕೆವಿನ್ ಎಂಬವರು ಈದು ಗ್ರಾಮದ ಬೊಲ್ಯೊಟ್ಟು ಗುರುಕುಲ ಸೆಂಟ್ರಲ್ ಸ್ಕೂಲ್‌ನಲ್ಲಿ ಓದುತ್ತಿದ್ದಾರೆ. ಇವರಿಬ್ಬರು ಶಾಲಾ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದರು.ಸೆ.2ರಂದು ಶಾಲಾ ಪ್ರಾಂಶುಪಾಲ ರೋಹಿತ್, ಹಾಸ್ಟೆಲ್‌ನ ಕೊಠಡಿಯಲ್ಲಿ ಬೆಡ್ ಮೇಲೆ ಗಲಾಟೆ ಮಾಡಿದ ಕಾರಣಕ್ಕಾಗಿ 7ನೇ ತರಗತಿಯ ವಿದ್ಯಾರ್ಥಿ ಮರಿಯನ್ ಕೆವಿನ್‌ಗೆ ಬೆತ್ತದಿಂದ ಹೊಡೆದು ಹಲ್ಲೆ ಮಾಡಿರುವುದಾಗಿ ದೂರಲಾಗಿದೆ.ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!