Tuesday, June 9, 2026
Homeಕರಾವಳಿಬಂಟ್ವಾಳ;ಸುಳ್ಳಮಲೆ ಗುಹಾತೀರ್ಥ ಸ್ನಾನ ಇಂದಿನಿಂದ ಆರಂಭ

ಬಂಟ್ವಾಳ;ಸುಳ್ಳಮಲೆ ಗುಹಾತೀರ್ಥ ಸ್ನಾನ ಇಂದಿನಿಂದ ಆರಂಭ

- Advertisement -
- Advertisement -

ಬಂಟ್ವಾಳ; ವರ್ಷಪ್ರತಿ ನಡೆಯುವ ಐತಿಹಾಸಿಕ ಧಾರ್ಮಿಕ ಹಿನ್ನೆಲೆ ಇರುವ ಸುಳ್ಳಮಲೆ ಗುಹಾತೀರ್ಥ ಸ್ನಾನಕ್ಕೆ ಇಂದು ಮುಹೂರ್ತ ನಡೆಯಿತು.

 ಸೆ. 15 ಶುಕ್ರವಾರದಿಂದ ಸೆ.19 ರಂದು  ಮಂಗಳವಾರದ ಭಾದ್ರಪದ ಶುಕ್ಲ ಚೌತಿಯವರೆಗೆ ಜರುಗಲಿದೆ. ಸೋಣ ಅಮಾವಾಸ್ಯೆಯಂದು ಬಿದಿರಿನ ಕೇರ್ಪು(ಏಣಿ) ಇಡುವ ಸಂಪ್ರದಾಯದ ಬಳಿಕ ಅರಸು ಶ್ರೀ ಗುಡ್ಡೆ ಚಾಮುಂಡಿ ಮತ್ತು ಪ್ರಧಾನಿ ಶ್ರೀ ಪಂಜುರ್ಲಿ ದೈವಗಳಿಗೆ ತಂಬಿಲ ಸೇವೆ ಒಳಗೊಂಡಂತೆ ಅನೇಕ ವಿಧಿ ವಿಧಾನದ ಬಳಿಕ ಭಕ್ತಾದಿಗಳಿಗೆ ತೀರ್ಥ ಸ್ನಾನಕ್ಕೆ ಮುಕ್ತ ಅವಕಾಶವನ್ನು ಕಲ್ಪಿಸಲಾಗುತ್ತದೆ.

ತೀರ್ಥ ಸ್ನಾನಕ್ಕೆ ಬರುವ ಭಕ್ತಾದಿಗಳು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿಕೊಂಡು ಬರುವ ಮೂಲಕ ತೀರ್ಥಕ್ಷೇತದ ಪಾವಿತ್ರ್ಯತೆಯನ್ನು ಕಾಪಾಡುವಂತೆ ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಸಚಿನ್ ರೈ‌ ಮಾಣಿಗುತ್ತು ಅವರು ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!