Wednesday, June 3, 2026
Homeಕರಾವಳಿಬಂಟ್ವಾಳ:ಪೊಲೀಸ್ ಸಿಬ್ಬಂದಿಯ ಮೊಬೈಲನ್ನೇ ಎಗರಿಸಿದ ಖತರ್ನಾಕ್ ಕಳ್ಳ

ಬಂಟ್ವಾಳ:ಪೊಲೀಸ್ ಸಿಬ್ಬಂದಿಯ ಮೊಬೈಲನ್ನೇ ಎಗರಿಸಿದ ಖತರ್ನಾಕ್ ಕಳ್ಳ

- Advertisement -
- Advertisement -

ಬಂಟ್ವಾಳ:ಪೊಲೀಸ್ ಸಿಬ್ಬಂದಿಯ ಮೊಬೈಲನ್ನೇ ಖತರ್ನಾಕ್ ಕಳ್ಳನೊಬ್ಬ ಎಗರಿಸಿದ ಘಟನೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.

ಮೆಲ್ಕಾರ್ ಟ್ರಾಫಿಕ್ ಎಚ್.ಸಿ.ದೇವರಾಜ್ ಅವರು ಅನಾರೋಗ್ಯದಿಂದಾಗಿ ಸೆ.17 ರಂದು ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಬಳಿಕ ಅವರು ಸೆ.19 ರಂದು ಜನರಲ್ ವಾರ್ಡ್ ಗೆ ಶಿಫ್ಟ್ ಆಗಿದ್ದರು. ಅವರು ಮಲಗಿದ್ದ ವೇಳೆ ಇವರ ಬೆಡ್ ಪಕ್ಕದಲ್ಲಿ ಟೇಬಲ್‌ ಮೇಲೆ ಇರಿಸಲಾಗಿದ್ದ ಆಂಡ್ರಾಯ್ಜ್ ಮೊಬೈಲ್ ಹಾಗೂ ಕೀ ಪೇಡ್ ಮೊಬೈಲ್ ಫೋನ್ ನ್ನು ಕಳ್ಳನೊಬ್ಬ ಎಗರಿಸಿದ್ದಾನೆ. ಇನ್ನು ಕಳ್ಳ ಮೊಬೈಲ್ ಕಳ್ಳತನ ಮಾಡಿದ ಮತ್ತು ಆತ ಆಸ್ಪತ್ರೆಗೆ ಬಂದು ಹೋಗುವ ಬಗ್ಗೆ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ.

ಈತ ಕಳೆದ ವಾರ ಐಸಿಯು ಘಟಕದೊಳಗೆ ನುಗ್ಗಿ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಜ್ಜಿಯೋರ್ವರಲ್ಲಿ ಒಮ್ಮೆ ಪೋನ್ ಕೊಡಿ ಅಜ್ಜಿ ಅರ್ಜೆಂಟಾಗಿ ಪೋನ್ ಮಾಡಲು ಇದೆ ಎಂದು ಹೇಳಿ ಮೊಬೈಲ್ ಪಡೆದುಕೊಂಡು ಹೋಗಿ ಮೊಬೈಲ್ ಸಮೇತ ಎಸ್ಕೇಪ್ ಆಗಿದ್ದ. ಇದೀಗ ಆತನೇ ಪೊಲೀಸ್ ಸಿಬ್ಬಂದಿಯ ಮೊಬೈಲ್ ಕಳ್ಳತನ ಮಾಡಿದ್ದು ಈತನ ಓಡಾಟದ ದೃಶ್ಯ ಸಿ.ಸಿ.ಕ್ಯಾಮರಾ ದಲ್ಲಿ ಸೆರೆಯಾಗಿದೆ.

ಇದೀಗ ಆಸ್ಪತ್ರೆಯಲ್ಲಿ ಈತನ ಪೋಟೋ ಅಂಟಿಸಲಾಗಿದ್ದು,ಈತನ ಚಹರೆ ಯನ್ನು ಗಮ‌ನಿಸಿದವರು ಕೂಡಲೇ ಪೋಲಿಸರಿಗೆ ಮಾಹಿತಿ ನೀಡಿ ಎಂದು ತಿಳಿಸಲಾಗಿದೆ.

- Advertisement -

Latest News

error: Content is protected !!