Friday, June 5, 2026
Homeಇತರರೈಲಿಗೆ ತಲೆ ಕೊಟ್ಟು ಖಾಸಗಿ ವಾಹಿನಿಯ ಕ್ಯಾಮರಾಮೆನ್ ಆತ್ಮಹತ್ಯೆ

ರೈಲಿಗೆ ತಲೆ ಕೊಟ್ಟು ಖಾಸಗಿ ವಾಹಿನಿಯ ಕ್ಯಾಮರಾಮೆನ್ ಆತ್ಮಹತ್ಯೆ

- Advertisement -
- Advertisement -

ಕಲಬುರಗಿ :  ಕಲಬುರಗಿ ಹೊರವಲಯದ ಪಿಡಿಎ ಎಂಜಿನಿಯರಿಂಗ್ ಕಾಲೇಜು ಬಳಿ  ರೈಲಿಗೆ ತಲೆ ಕೊಟ್ಟು ಖಾಸಗಿ ನ್ಯೂಸ್ ಚಾನೆಲ್‌ವೊಂದರ ಕ್ಯಾಮರಮೆನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹನುಮಂತ್‌ರಾವ್ (42) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ . ಮೃತ ಹನುಮಂತ್  ರಾವ್ ಕಲಬುರಗಿ ಮೂಲದವರು. ಈ ಹಿಂದೆ ಹನುಮಂತ ರಾವ್ ಬೆಂಗಳೂರಿನಲ್ಲಿ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ಯಾಮರಾಮೆನ್ ಆಗಿ ಕಾರ್ಯವನ್ನು ನಿರ್ವಹಿಸುತ್ತಿದ್ದರು. ಆ ಬಳಿಕ ಕೆಲಸ ತೊರದು ಸ್ಥಳೀಯ ವಾಹಿನಿಯಲ್ಲಿ ಕ್ಯಾಮರಾಮೆನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು

ಇವರ ಆತ್ಮಹತ್ಯೆಗೆ ನಿಜವಾದ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ವೈಯುಕ್ತಿಕ ಸಮಸ್ಯೆಗಳಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅನ್ನೋ ಮಾತುಗಳು ಕೇಳಿ ಬರುತ್ತಿವೆ. ಇನ್ನು ಘಟನಾ ಸ್ಥಳದಲ್ಲಿ ಮದ್ಯದ ಬಾಟಲಿಗಳು ಪತ್ತೆಯಾಗಿದ್ದು ಅನುಮಾನಕ್ಕೆ ಕಾರಣವಾಗಿದೆ. ಈ ಸಂಬಂಧ ವಾಡಿ ರೈಲ್ವೆ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!