Thursday, June 4, 2026
HomeUncategorizedಮಡಿಕೇರಿಯಲ್ಲಿ ಹಾಲಿನ ಟ್ಯಾಂಕರ್ ಮತ್ತು ಬೈಕ್ ನಡುವೆ ಅಪಘಾತ; ಉಡುಪಿ ಮೂಲದ ವಿದ್ಯಾರ್ಥಿ ಸಾವು

ಮಡಿಕೇರಿಯಲ್ಲಿ ಹಾಲಿನ ಟ್ಯಾಂಕರ್ ಮತ್ತು ಬೈಕ್ ನಡುವೆ ಅಪಘಾತ; ಉಡುಪಿ ಮೂಲದ ವಿದ್ಯಾರ್ಥಿ ಸಾವು

- Advertisement -
- Advertisement -

ಮಡಿಕೇರಿ;ಹಾಲಿನ ಟ್ಯಾಂಕರ್ ಮತ್ತು ಬೈಕ್ ನಡುವೆ ಸಂಭವಿಸಿ ಉಡುಪಿ ಮೂಲದ ವಿದ್ಯಾರ್ಥಿ ಮೃತಪಟ್ಟ ಘಟನೆ ಕಾಟಕೇರಿ ಬಳಿ ನಡೆದಿದೆ.ಉಡುಪಿ ಮೂಲದ ವಿಜೇಶ್ ಮೃತ ವಿದ್ಯಾರ್ಥಿ.

ಬುಧವಾರ ಸಂಜೆ ಉಡುಪಿಯಿಂದ ವಿಜೇಶ್ ಮತ್ತು ಶಿವಾನಂದ್ ಬೈಕ್‍ನಲ್ಲಿ ಮಡಿಕೇರಿ ಕಡೆಗೆ ತೆರಳುತ್ತಿದ್ದಾಗಕಾಟಕೇರಿ ಬಳಿ ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಹಾಲಿನ ಟ್ಯಾಂಕರ್ ಬೈಕ್ ಗೆ ಢಿಕ್ಕಿಯಾಗಿದೆ.ಘಟನೆಯಲ್ಲಿ ಬೈಕ್ ಸವಾರ ವಿಜೇಶ್ ಮೃತಪಟ್ಟಿದ್ದು, ಹಿಂಬದಿ ಸವಾರ ಶಿವಾನಂದ್ ಅವರಿಗೆ ಗಂಭೀರ ಗಾಯಗಳಾಗಿವೆ.ಗಾಯಾಳುವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!