Thursday, June 4, 2026
Homeಕರಾವಳಿಉಡುಪಿಕಾಪು: ಪಡುಕುತ್ಯಾರು ಆನೆಗುಂದಿ ಸರಸ್ವತಿ ಪೀಠಕ್ಕೆ‌ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

ಕಾಪು: ಪಡುಕುತ್ಯಾರು ಆನೆಗುಂದಿ ಸರಸ್ವತಿ ಪೀಠಕ್ಕೆ‌ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

- Advertisement -
- Advertisement -

ಉಡುಪಿ: ಕಾಪು ತಾಲೂಕಿನ ಪಡುಕುತ್ಯಾರುವಿನಲ್ಲಿರುವ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠಕ್ಕೆ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿದರು.

ಮಹಾಸಂಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ನಡೆಯುತ್ತಿದ್ದು, ಪರಮಪೂಜ್ಯ ಜಗದ್ಗುರು ಅನಂತಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳು ಸಚಿವೆ ಹೆಬ್ಬಾಳ್ಕರ್ ಅವರನ್ನು ಆಶೀರ್ವದಿಸಿದರು.

ಈ ವೇಳೆ ಪ್ರತಿಷ್ಠಾನದ‌‌ ಅಧ್ಯಕ್ಷ ವಡೆರೊಬಳಿ ಶ್ರೀಧರ್ ಆಚಾರ್ಯ, ಹಳೆಯಂಗಡಿ ಸೂರ್ಯಕುಮಾರ್ ಸೇರಿದಂತೆ ಮಠದ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!