Saturday, June 6, 2026
Homeಕರಾವಳಿಮಂಗಳೂರಿನಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ನಾಲ್ವರು ಅರೆಸ್ಟ್

ಮಂಗಳೂರಿನಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ನಾಲ್ವರು ಅರೆಸ್ಟ್

- Advertisement -
- Advertisement -

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಒಟ್ಟು 55 ಗ್ರಾಂ ತೂಕದ 2 ಲಕ್ಷ 75 ಸಾವಿರ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.ಇದೇ ವೇಳೆ ಸ್ಕೂಟರ್, ಮೊಬೈಲ್ ಫೋನ್ ಸೇರಿದಂತೆ ಒಟ್ಟು ನಾಲ್ಕು ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಕೂಡಾ ಬಂಧಿತರಿಂದ ವಶಪಡಿಸಿಕೊಳ್ಳಲಾಗಿದೆ.

ಅಬ್ದುಲ್ ಅಜೀಜ್, ಅಕ್ಷಿತ್ ಕುಮಾರ್, ಜಾಕೀರ್ ಮತ್ತು ಕಾರ್ತಿಕ್ ಸುವರ್ಣ ಬಂಧಿತ ಆರೋಪಿಗಳಾಗಿದ್ದು, ಈ ಪೈಕಿ ಅಬ್ದುಲ್ ಅಜೀಜ್ 15 ದಿನಗಳ ಹಿಂದೆಯಷ್ಟೇ ಜಾಮೀನು ಮೇಲೆ ಬಿಡುಗಡೆಯಾಗಿದ್ದಾರೆ‌.ಮಂಗಳೂರು ನಗರದ ಕೆ.ಎಸ್. ರಾವ್ ರಸ್ತೆ, ಉಳ್ಳಾಲಬೈಲ್ ಪರಿಸರದಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

- Advertisement -

Latest News

error: Content is protected !!