Tuesday, July 1, 2025
Homeಕರಾವಳಿಕಡಬ; ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಕೆಳಗೆ ಬಿದ್ದು ಓರ್ವ ಸಾವು ಮತ್ತೋರ್ವರಿಗೆ ಗಾಯ

ಕಡಬ; ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಕೆಳಗೆ ಬಿದ್ದು ಓರ್ವ ಸಾವು ಮತ್ತೋರ್ವರಿಗೆ ಗಾಯ

spot_img
- Advertisement -
- Advertisement -

ಕಡಬ; ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಕೆಳಗೆ ಬಿದ್ದು ಓರ್ವ ಸಾವನ್ನಪ್ಪಿ ಮತ್ತೋರ್ವರಿಗೆ ಗಾಯವಾದ ಘಟನೆ ಭಾನುವಾರ ಸಂಜೆ ಕಡಬದಲ್ಲಿ ನಡೆದಿದೆ. ಕಡಬ ತಾಲೂಕಿನ ಗ್ರಾಮದ ಕಳಾರ ಸಮೀಪದ ಕುದ್ಕೋಳಿ ನಿವಾಸಿ ಅಚ್ಚುತ್ತ ಗೌಡ (63) ಮೃತ ದುರ್ದೈವಿ.

ಮೃತರು ಭಾನುವಾರ ಸಂಜೆ ಹಾಲು ಡಿಪೋ ಗೆ ಬಂದು  ಕಡಬ ಮುಖ್ಯ ಪೇಟೆಯಿಂದ ಕಾಲೇಜು ರಸ್ತೆಯ ಸಮೀಪ ತಲುಪುವ ವೇಳೆ  ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮನೆಗೆ ಹೊರಟಿದ್ದ ವೇಳೆ  ಅಚ್ಚುತ ಗೌಡ ಹಾಗೂ ಬಲ್ಯ ನಿವಾಸಿ ಚಂದ್ರಶೇಖರ ಎಂಬವರು ಬಸ್ಸಿನಿಂದ ರಸ್ತೆಗೆಸೆಯಲ್ಪಟ್ಟಿದ್ದಾರೆ.

ಗಂಭೀರ ಗಾಯಗೊಂಡ ಅಚ್ಚುತ್ತ ಗೌಡರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಇನ್ನೋರ್ವ  ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಮೃತರು ಮೂಲತ ಪೆರಾಬೆ ಗ್ರಾಮದ ಬೀರಂತಡ್ಕ ನಿವಾಸಿ. ಇವರು ಕಳಾರದಲ್ಲಿ ಭೂಮಿ ಖರೀದಿಸಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಬಸ್ಸಿನಲ್ಲಿ ಬಾಗಿಲು ಇದ್ದರೂ ಬಾಗಿಲು ಹಾಕಲಿಲ್ಲವೇಕೆ ಎಂದು ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಚರ್ಚಿಸುತ್ತಿದ್ದಾರೆ.

- Advertisement -
spot_img

Latest News

error: Content is protected !!