Sunday, June 7, 2026
Homeಕರಾವಳಿಮಂಗಳೂರು; ಹೃದಯಾಘಾತಕ್ಕೆ ಯುವ ಪೊಲೀಸ್ ಸಿಬ್ಬಂದಿ ಬಲಿ

ಮಂಗಳೂರು; ಹೃದಯಾಘಾತಕ್ಕೆ ಯುವ ಪೊಲೀಸ್ ಸಿಬ್ಬಂದಿ ಬಲಿ

- Advertisement -
- Advertisement -

ಮಂಗಳೂರು; ಹೃದಯಾಘಾತಕ್ಕೆ ಯುವ ಪೊಲೀಸ್ ಸಿಬ್ಬಂದಿ ಬಲಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ಸೋಮನ ಗೌಡ ಚೌದರಿ (31) ಮೃತ ದುರ್ದೈವಿ.

ವಯರ್ ಲೆಸ್ ಇನ್ಸ್ಪೆಕ್ಟರ್ ವಾಹನಕ್ಕೆ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮನ ಗೌಡ ಮೂಲತಾ ಬಿಜಾಪುರ ಜಿಲ್ಲೆಯವರು. ಇನ್ಸ್ಪೆಕ್ಟರ್‌ ಗೆ ಡೆಂಗ್ಯೂ ಜ್ವರವಿದ್ದರಿಂದ ನಗರದ ಫಳ್ನಿರ್‌ ನಲ್ಲಿರುವ ಖಾಸಗಿ ಆಸ್ಪತ್ರೆಗೆ ಮಂಗಳವಾರ ಬೆಳಿಗ್ಗೆ ಕರೆದುಕೊಂಡು ಹೋಗಿದ್ದರು.ಅಧಿಕಾರಿಯನ್ನು ಆಸ್ಪತ್ರೆ ಬಳಿ ಇಳಿಸಿ ವಾಹನ ಪಾರ್ಕ್ ಮಾಡಲು ಹೋದ ಸಂದರ್ಭ ಸೋಮನಗೌಡ ಏಕಾಏಕಿ ಕುಸಿದು ಬಿದ್ದಿದ್ದಾರೆ ಕೂಡಲೇ ಸ್ಥಳೀಯರು ಧಾವಿಸಿ 112 ಗೆ ಕರೆ ಮಾಡಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲು ಕೊಂಡುಹೋಗುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ವಿವಾಹಿತರಾಗಿರುವ ಸೋಮನಗೌಡ ಕಳೆದ 7 ವರ್ಷಗಳಿಂದ ನಗರ ಶಶಸ್ತ್ರ ದಳದಲ್ಲಿ ಸೇವೆ ಸಲಿಸುತ್ತಿದ್ದಾರೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಮಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಇತ್ತೀಚಿನ ದಿನಗಳಲ್ಲಿ ಅಕಾಲಿಕ ಮರಣಕ್ಕೆ ತುತ್ತಾಗುತ್ತಿರುವುದು ಆತಂಕ ಸೃಷ್ಟಿಸಿದೆ.

- Advertisement -

Latest News

error: Content is protected !!