Sunday, June 7, 2026
HomeUncategorizedನಿಷೇದಾಜ್ಞೆ ನಡುವೆ ಪ್ರಚೋದನಾಕಾರಿ ಹೇಳಿಕೆ ಆರೋಪ:ಶಿವಮೊಗ್ಗದಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ದೂರು ದಾಖಲು

ನಿಷೇದಾಜ್ಞೆ ನಡುವೆ ಪ್ರಚೋದನಾಕಾರಿ ಹೇಳಿಕೆ ಆರೋಪ:ಶಿವಮೊಗ್ಗದಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ದೂರು ದಾಖಲು

- Advertisement -
- Advertisement -

ಶಿವಮೊಗ್ಗ: ಪುತ್ತೂರಿನ‌ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ದ ಶಿವಮೊಗ್ಗದಲ್ಲಿ ದೂರು ದಾಖಲಾಗಿದೆ.

ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದಡಿಯಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲಾಗಿದೆ.

ನಿನ್ನೆ ಶಿವಮೊಗ್ಗದ ರಾಗಿಗುಡ್ಡದ ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದ ವೇಳೆ‌ ಮನೆಯಲ್ಲಿದ್ದ ಆಯುಧಗಳಿಗೆ ಪೂಜೆ ಮಾಡಿ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿಕೆ ನೀಡಿದ್ದರು.

144 ಸೆಕ್ಷನ್ ಜಾರಿಯಿದ್ದು ನಿಷೇಧಾಜ್ಞೆ ನಡುವೆ ಪ್ರಚೋದನಾಕಾರಿ‌ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.

ನಿನ್ನೆ ರಾಗಿಗುಡ್ಡಕ್ಕೆ ಭೇಟಿ‌‌ ನೀಡಿದ್ದ ಅರುಣ್ ಕುಮಾರ್ ಪುತ್ತಿಲ, ಕಲ್ಲು ತೂರಾಟದಿಂದ ಸಂತ್ರಸ್ತರಾದ ಹಿಂದೂ‌ ಸಮುದಾಯದ ಮನೆಗಳಿಗೆ ಭೇಟಿ ನೀಡಿದ್ದರು.

- Advertisement -

Latest News

error: Content is protected !!