Saturday, June 6, 2026
Homeಉತ್ತರ ಕನ್ನಡಹಿಂದೂ ಸಂಪ್ರದಾಯದಂತೆ ಮುಸ್ಲಿಂ ಕುಟುಂಬವೊದರಿಂದ ಗೋಕರ್ಣದಲ್ಲಿ ನಡೆಯಿತು ಪಿತೃಕಾರ್ಯ

ಹಿಂದೂ ಸಂಪ್ರದಾಯದಂತೆ ಮುಸ್ಲಿಂ ಕುಟುಂಬವೊದರಿಂದ ಗೋಕರ್ಣದಲ್ಲಿ ನಡೆಯಿತು ಪಿತೃಕಾರ್ಯ

- Advertisement -
- Advertisement -

ಕಾರವಾರ; ಹಿಂದೂ ಸಂಪ್ರದಾಯದಂತೆ ಮುಸ್ಲಿಂ ಕುಟುಂಬವೊಂದು ಗೋಕರ್ಣದಲ್ಲಿ ಪಿತೃಕಾರ್ಯ ನೆರವೇರಿಸಿದೆ.

ಧಾರವಾಡದ ಕಾರ್ಪೆಂಟರ್ ಕೆಲಸ ಮಾಡುವ ಮುಸ್ಲಿಂ ಕುಟುಂಬವೊಂದು ಧಾರವಾಡದ ಜ್ಯೋತಿಷಿ ಒಬ್ಬರ ಸಲಹೆ ಮೇರೆಗೆ ನಾರಾಯಣ ಬಲಿ, ತ್ರಿಪಿಂಡಿ ಶ್ರಾದ್ಧ ಮತ್ತು ತಿಲಹವನ ಇಲ್ಲಿಯ ಪಿತೃಶಾಲೆಯಲ್ಲಿ ನಡೆಸಿದ್ದಾರೆ.
ಮುಸ್ಲಿಂ ಕುಟುಂಬ ಜ್ಯೋತಿಷಿಯ ಸಲಹೆಯಂತೆ ಗೋಕಣಕ್ಕೆ ಬಂದು ಕ್ಷೇತ್ರ ಪುರೋಹಿತರಾದ ವೇ.ನಾಗರಾಜ ಭಟ್ ಹಾಗೂ ವೇ.ಸುಬ್ರಹಣ್ಯ ಚಿತ್ರಿಗೆಮಠ ಇವರ ನೇತೃತ್ವದಲ್ಲಿ ಎಲ್ಲಾ ಪೂಜಾ ಕಾರ್ಯ ನೆರವೇರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಧಾರವಾಡದ ಧಾನೇಶ್ವರಿ ನಗರದ ಶಂಸಾದ್ ನಾವು ಮೊದಲಿನಿಂದಲೂ ಕುಂಡಲಿ, ಜಾತಕ, ಹಿಂದೂ ಸಂಪ್ರದಾಯದ ಮೇಲೆ ನಂಬಿಕೆ ಉಳ್ಳವರು. ನಮ್ಮ ತಂದೆ ಗದಗಿನ ವೀರನಾರಾಯಣ ದೇವಸ್ಥಾನದ ಹತ್ತಿರ ಬ್ರಾಹ್ಮಣ ಮತ್ತು ಲಿಂಗಾಯತ ಸಮುದಾಯದವರ ಜೊತೆಯಲ್ಲಿಯೇ ಬೆಳೆದವರು. ತಮ್ಮನಿಗೆ ಮದುವೆ ಸಂಬಂಧ ಸರಿಯಾಗಿ ಹೆಣ್ಣು ಸಿಗದೇ ಇದ್ದಾಗ ಜ್ಯೋತಿಷಿಯ ಮೊರೆ ಹೋಗಿದ್ದೆವು. ಅವರು ತಿಳಿಸಿದಂತೆ ತಮ್ಮನ ಮದುವೆ, ಮಾನಸಿಕ ಶಾಂತಿ ಹಾಗೂ ಉದ್ಯೋಗದಲ್ಲಿ ಏಳಿಗೆ ಸಿಗಲಿ ಎಂಬ ಉದ್ಧೇಶದಿಂದ ಈ ಕಾರ್ಯ ಮಾಡಿದ್ದೇವೆ ಎಂದಿದ್ದಾರೆ.

- Advertisement -

Latest News

error: Content is protected !!